ಅರಣ್ಯ ಸಿಬ್ಬಂದಿಗಳ ದೌರ್ಜನ್ಯ, ವ್ಯಾಪಕವಾದ ಖಂಡನೆ.

ಅರಣ್ಯ ಸಿಬ್ಬಂದಿಗಳ ದೌರ್ಜನ್ಯ, ವ್ಯಾಪಕವಾದ ಖಂಡನೆ.

ಶಿರಸಿ: ಇತ್ತೀಚಿನ ದಿನಗಳಲ್ಲಿ ಅರಣ್ಯವಾಸಿಗಳ ಮೇಲೆ ಅರಣ್ಯ ಸಿಬ್ಬಂದಿಗಳಿAದ ದೌರ್ಜನ್ಯ, ಕಿರುಕುಳ ಪ್ರಕರಣಗಳು ವ್ಯಾಪಕವಾಗಿ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶಿರಸಿ ತಾಲೂಕ, ದೇವನಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ, ಹಚ್ಚಟ್ಟಿ ಗ್ರಾಮದ ಕೃಷ್ಣ ಕೆರಿಯ ಮರಾಠಿ ವಾಸ್ತವ್ಯದ ಮನೆ ಸಂಪೂರ್ಣವಾಗಿ ನೆಲಸಮ ಮಾಡಿ, ಅರಣ್ಯ ಅತಿಕ್ರಮಣದಾರರ ಕುಟುಂಬವನ್ನ ನಿರಾಶ್ರಿತರನ್ನಾಗಿ ಮಾಡಿರುವ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.  

ಸೂಕ್ತ ಕ್ರಮಕ್ಕೆ ರವೀಂದ್ರ ನಾಯ್ಕ ಅಗ್ರಹ :

 ಸಭಾಧ್ಯಕ್ಷರ ಕ್ಷೇತ್ರದಲ್ಲಿ ಪದೇ ಪದೇ ಅರಣ್ಯವಾಸಿಗಳ ಮೇಲೆ ಕಿರುಕುಳ, ದೌರ್ಜನ್ಯ ಹಾಗೂ ಹಿಂಸೆ ಜರಗುತ್ತಿರುವ ಪ್ರಕರಣಗಳ ಕುರಿತು ಸೂಕ್ತ ತನಿಖೆಗೆ ಒಳಪಡಿಸಿ, ಕಾನೂನು ಬಾಹಿರ ಕೃತ್ಯವೆಸಗಿದ ಅರಣ್ಯ ಸಿಬ್ಬಂದಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅಗ್ರಹಿಸಿದ್ದಾರೆ.