ಹರ್ಷ ಕುಟುಂಬ ಸದಸ್ಯರಿಗೆ ದುಷ್ಕರ್ಮಿಗಳಿಂದ ಬೆದರಿಕೆ...

ಹರ್ಷ ಕುಟುಂಬ ಸದಸ್ಯರಿಗೆ ದುಷ್ಕರ್ಮಿಗಳಿಂದ ಬೆದರಿಕೆ...

ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಮೃತ ಹರ್ಷನ ಕುಟುಂಬಸ್ಥರಿಗೆ ದುಷ್ಕರ್ಮಿಗಳು ಬೆದರಿಕೆ ಹಾಕಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ... ಇದರ ಜೊತೆಗೆ ಓರ್ವ ಯುವಕನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ ಹಿನ್ನಲೆ ಮತ್ತೆ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ...

ಸೋಮವಾರ ತಡರಾತ್ರಿ  ಮಾರಕಾಸ್ತ್ರಗಳನ್ನು ಹಿಡಿದು ಬೈಕ್ ನಲ್ಲಿ ಬೊಬ್ಬಿಡುತ್ತಾ ಓಡಾಡುತ್ತಿದ್ದ ಗುಂಪೊಂದು, ಸೀಗೆಹಟ್ಟಿಯ ಹರ್ಷನ ಮನೆ ಬಳಿ ಬೈಕ್ ನಿಲ್ಲಿಸಿ ಹರ್ಷನ ಸಹೋದರಿ ಅಶ್ವಿನಿ ಹಾಗೂ ಕುಟುಂಬದವರಿಗೆ ನಿಂದಿಸಿ ಬೆದರಿಕೆ ಹಾಕಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ವಿಷಯ ತಿಳಿಯುತ್ತದ್ದಂತೆ ಸ್ಥಳೀಯ ಯುವಕರ ಗುಂಪು ದುಷ್ಕರ್ಮಿಗಳನ್ನು ಹಿಂಬಾಲಿಸಿದ್ದಾರೆ... ಪರಾರಿಯಾಗುವ ವೇಳೆ ಕಿಡಿಗೇಡಿಗಳು ಭರಮಪ್ಪ ನಗರದಲ್ಲಿ ಪ್ರಕಾಶ್ ಎಂಬ ಯುವಕನಿಗೆ ಕಲ್ಲಿನಿಂದ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ..

ಸದ್ಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಕಾಶ್ ಚಿಕಿತ್ಸೆ ಪಡೆಯುತ್ತಿದ್ದಾರೆ.. ಈ ಕುರಿತು ಮಾಹಿತಿ ನೀಡಿರುವ ಎಸ್ಪಿ ಮಿಥುನ್, ಯುವನಿಗೆ ಸಣ್ಣ - ಪುಟ್ಟ ಗಾಯಗಳಾಗಿವೆ, ಚೇತರಿಸಿಕೊಂಡಿದ್ದಾರೆ ಎಂದಿದ್ದಾರೆ.. ಬೈಕ್ ನಲ್ಲಿ ಬಂದ ಆರೋಪಿಗಳು ಅವ್ಯಾಚ ಪದಗಳಿಂದ ನಿಂದಿಸಿ, ಘೋಷಣೆಗಳನ್ನು koogi ವಾಪಾಸ್ ಮರಳುವಾಗ ಯುವಕನಿಗೆ ಕಲ್ಲಿನಿಂದ ಹೊಡೆದು ತೆರಳಿದ್ದಾರೆ... ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಚುರುಕುಗೊಳಿಸಿದ್ದಾರೆ...

 

ಈ ಬಗ್ಗೆ ಮಾತನಾಡಿರುವ ಹರ್ಷ ಸಹೋದರಿ ಅಶ್ವಿನಿ, ನಮ್ಮ ಕುಟುಂಬದ ಸದಸ್ಯರು ಪ್ರತಿದಿನ ಭಯದಿಂದಲೇ ದಿನದೂಡುವ ಪರಿಸ್ಥಿತಿ ಎದುರಾಗಿದೆ, ನಮ್ಮ ಕುಟುಂಬಕ್ಕೆ ಪೊಲೀಸರು ರಕ್ಷಣೆ ನೀಡಬೇಕೆಂದು ಪತ್ರಿಕಾ ಗೋಷ್ಟಿಯಲ್ಲಿ ತಿಳಿಸಿದ್ದಾರೆ..