ಪುತ್ತೂರು: ಯುವಕರಿಗೆ ಚಿತ್ರಹಿಂಸೆ ನೀಡಿದ ಪೊಲೀಸರ ವಿರುದ್ಧ ಕ್ರಮ - ಪಿ.ಎಸ್.ಐ ಮತ್ತು ಪಿಸಿ ಅಮಾನತು

ಭೇಟಿ ನೀಡಿ ಯುವಕರಿಗೆ ಸಾಂತ್ವನ ಹೇಳಿದ ಚಕ್ರವರ್ತಿ ಸೂಲಿಬೆಲೆ

ಪುತ್ತೂರು : ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ ಆರೋಪಿತರಿಗೆ ಪೊಲೀಸರು ಹಲ್ಲೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಆಸ್ಪತ್ರೆಗೆ ಭೇಟಿ ನೀಡಿ ಯುವಕರ ಆರೋಗ್ಯ ವಿಚಾರಿಸಿ, ಸಾಂತ್ವನ ಹೇಳಿದ ಚಕ್ರವರ್ತಿ ಸೂಲಿಬೆಲೆ.

ಪುತ್ತೂರು ಡಿಎಸ್ಪಿ, ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ, ಪುತ್ತೂರು ಗ್ರಾಮಾಂತರ ಠಾಣಾ ಪಿಸಿ ಹರ್ಷಿತ್ ರವರ ವಿರುದ್ಧ ಪುತ್ತೂರು ನಗರ ಠಾಣೆ  ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿಎಸ್ಪಿ ರವರಿಗೆ ವಹಿಸಲಾಗಿದೆ. ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಪುತ್ತೂರು ಗ್ರಾಮಾಂತರ ಠಾಣಾ ಪಿ.ಎಸ್.ಐ, ಪುತ್ತೂರು ಗ್ರಾಮಾಂತರ ಠಾಣಾ ಪಿಸಿ ಹರ್ಷಿತ್ ರನ್ನು ಸೇವೆಯಿಂದ ಅಮಾನತು ಗೊಳಿಸಲಾಗಿದೆ ಹಾಗೂ ಪುತ್ತೂರು ಡಿಎಸ್ಪಿ ರವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ.