ಮಂಗಳೂರು: ವಿಷಾಹಾರ ಶಂಕೆ - ನರ್ಸಿಂಗ್ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿಯರು ಅಸ್ವಸ್ಥ

ಮಂಗಳೂರು: ನಗರದ ಖಾಸಗಿ ನರ್ಸಿಂಗ್ ಕಾಲೇಜಿನ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಾಸ್ಟೆಲಿನಲ್ಲಿ ಆಹಾರದಲ್ಲಿ ತೊಂದರೆ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. 

ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದ್ದು, ಎರಡು ತಿಂಗಳಲ್ಲಿ ಇದು ಎರಡನೇ ಬಾರಿಗೆ ಈ ರೀತಿ ಆಗಿದೆ ಎಂದು ವಿದ್ಯಾರ್ಥಿನಿಯರ ಹೆತ್ತವರು ತಿಳಿಸಿದ್ದಾರೆ. ಇನ್ನು ಕೆಲವು ವಿದ್ಯಾರ್ಥಿನಿಯರಿಗೆ ವಾಂತಿ ಮತ್ತು ಭೇದಿ ಉಂಟಾಗಿದ್ದು, ಹೊಟ್ಟೆ ನೋವಿನಿಂದ ಬಳಲಿದ್ದಾರೆ. ರಾತ್ರಿ ವೇಳೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಬೆಳಗ್ಗಿನ ಹೊತ್ತಿಗೆ ಮರಳಿ ಹಾಸ್ಟೆಲ್ ಗೆ ರವಾನೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಯಾವ ಕಾರಣಕ್ಕೆ ಸಮಸ್ಯೆ ಆಗಿದೆ ಎನ್ನುವುದು ತಿಳಿದುಬಂದಿಲ್ಲ. ಪರಿಶೀಲನೆ ಮಾಡುತ್ತ ಇದ್ದೇವೆ. ನಾವು ಜಿಲ್ಲಾ ಘಟಕದಿಂದ ಎಲ್ಲ ಹಾಸ್ಟೆಲ್ ಗಳಿಗೂ ರುಟೀನ್ ಭೇಟಿ ಕೊಡುತ್ತೇವೆ. ತಪಾಸಣೆ ನಡೆಸುತ್ತೇವೆ ಎಂದು ತಿಳಿಸಿರುವುದಾಗಿ ವಿದ್ಯಾರ್ಥಿನಿಯರ ಹೆತ್ತವರು ಹೇಲಿದ್ದಾರೆ.