ಮಂಗಳೂರು: ವಿಮಾನಕ್ಕೆ ಹಕ್ಕಿ ಡಿಕ್ಕಿ- ಟೇಕಾಫ್ ಕ್ಯಾನ್ಸಲ್.!

ದುಬೈಗೆ ಹೊರಟ್ಟಿದ್ದ ವಿಮಾನಕ್ಕೆ ಹಕ್ಕಿ ಢಿಕ್ಕಿ, ಟೇಕಾಫ್ ಕ್ಯಾನ್ಸಲ್.!

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ದುರಂತವೊಂದು ತಪ್ಪಿಹೋಗಿದೆ.

ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಬೆಳಗ್ಗೆ 8.30ಕ್ಕೆ ಪ್ರಯಾಣಿಕರ ಸಹಿತ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನ ಇದಾಗಿದ್ದು, ಟ್ಯಾಕ್ಸಿ ವೇ ದಾಟಿ ರನ್ ವೇನಲ್ಲಿ ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಇಂಡಿಗೋ ವಿಮಾನದ ರೆಕ್ಕೆಯ ಭಾಗಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ತಕ್ಷಣವೇ ಇದನ್ನರಿತ ಪೈಲಟ್​ ಭಾರೀ ದುರಂತವನ್ನು ತಪ್ಪಿಸುವ ಮೂಲಕ ಪ್ರಯಾಣಿಕರ ಜೀವ ಉಳಿಸಿದ್ದಾರೆ. ಹಕ್ಕಿ ಡಿಕ್ಕಿ ಹೊಡೆದೊಡನೆ ಪೈಲಟ್​ ಅಪಾಯದ ಸೂಚನೆ ಅರಿತು ಎಟಿಸಿಗೆ ಮಾಹಿತಿ ನೀಡಿದ್ದಾರೆ. ನಂತರ ಟೇಕಾಫ್ ಕ್ಯಾನ್ಸಲ್ ಮಾಡಿ ರನ್ ವೇನಿಂದ ವಾಪಾಸ್ ಬಂದಿಳಿದಿದೆ. ಸದ್ಯ ಅಧಿಕಾರಿಗಳು ಪ್ರಯಾಣಿಕರನ್ನ ಇಳಿಸಿ ವಿಮಾನದ ತಪಾಸಣೆ ಮಾಡುತ್ತಿದ್ದಾರೆ. ಇನ್ನು ಪ್ರಯಾಣಿಕರಿಗಾಗಿ ಬೆಂಗಳೂರಿನಿಂದ ಆಗಮಿಸಿದ ಮತ್ತೊಂದು ವಿಮಾನದ ಮೂಲಕ ವ್ಯವಸ್ಥೆ ಕಲ್ಪಿಸಲಾಗಿದೆ.