ಉಡುಪಿ: ವಿವಾಹಿತ ಮಹಿಳೆ ನಾಪತ್ತೆ - ದೂರು ದಾಖಲು

ವಿವಾಹಿತ ಮಹಿಳೆ ನಾಪತ್ತೆ - ದೂರು ದಾಖಲು

ಉಡುಪಿ: ಬೆಂಗಳೂರಿಗೆ ಹೋಗಿ ಬರುವುದಾಗಿ ಹೇಳಿ ಹೋದ ಮಹಿಳೆ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಬಹ್ರೇನ್‌ ದೇಶದಲ್ಲಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಮೂಲದ ಶುಭ ಕೆ (38) ಎಂಬ ಮಹಿಳೆಯು ಜನವರಿ 3 ರಂದುವಿದೇಶದಿಂದ ಗಂಡನ ಮನೆಯಾದ ಉಡುಪಿ ಗೋಪಾಲಪುರದಲ್ಲಿರುವ ಮನೆಗೆ ಬಂದು, ಬೆಂಗಳೂರಿಗೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ ಎತ್ತರ, ಸಪೂರ ಶರೀರ, ಎಣ್ಣೆಗಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ, ಮರಾಠಿ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ.

ಇನ್ನು ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್‌ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.