ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದ್ದು, 19 ಕೆಜಿ ತೂಕದ ಸಿಲಿಂಡರ್‌ ಬೆಲೆ 83.50 ರೂ. ಇಳಿಕೆಯಾಗಿದ್ದು, ದೆಹಲಿಯಲ್ಲಿ 1,773 ರೂ.ಗೆ ಮಾರಾಟವಾಗುತ್ತಿದೆ.

ಕಳೆದ ತಿಂಗಳು ಮೇ 1 ರಂದು ವಾಣಿಜ್ಯ ಸಿಲಿಂಡರ್‌ ಬೆಲೆಯಲ್ಲಿ 171.50 ರೂ. ಕಡಿತಗೊಳಿಸಲಾಗಿತ್ತು. ಅದಕ್ಕೂ ಮುನ್ನ ಏಪ್ರಿಲ್‌ನಲ್ಲಿ 91.50 ರೂ. ಕಡಿತಗೊಳಿಸಲಾಗಿತ್ತು. ಆದರೆ ಗೃಹಬಳಕೆಯ ಎಲ್‍ಪಿಜಿ ಸಿಲಿಂಡರ್‌ ದರ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ತೂಕದ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ದರ ಕಳೆದ ತಿಂಗಳಿನಂತೆಯೇ ಇದೆ.

ಗೃಹ ಬಳಕೆ ಸಿಲಿಂಡರ್‌ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ಸದ್ಯ ವಾಣಿಜ್ಯ ಸಿಲಿಂಡರ್‌ ಬೆಲೆ ಕೋಲ್ಕತ್ತಾದಲ್ಲಿ 1,875.50 ರೂ., ಮುಂಬೈನಲ್ಲಿ 1,725 ರೂ., ಚೆನ್ನೈನಲ್ಲಿ 1,937ರೂ. ಗಳಿಗೆ ಮಾರಾಟವಾಗುತ್ತಿದೆ.