ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಕಷ್ಟಕ್ಕೆ ಸ್ಪಂದಿಸದ ಪೊಲೀಸರು : ಮಹಿಳೆಯ ಪ್ರತಿಭಟನೆ

ನ್ಯಾಯಕ್ಕಾಗಿ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗುವಿನ ಜೊತೆ ರಾತ್ರಿ 1 ಗಂಟೆವರೆಗೂ ಠಾಣೆಯಲ್ಲಿ ಕೂತ ಘಟನೆ ಚಿಕ್ಕಮಗಳೂರು  ಜಿಲ್ಲೆಯ ಕಳಸದಲ್ಲಿ ನಡೆದಿದೆ.

ಸಂಸೆ ಗ್ರಾಮದ ಮಹಿಳೆಯೊಬ್ಬರು ತನ್ನ ಮತ್ತು ಗಂಡನಿಗೆ ಅವಾಚ್ಯ ಶಬ್ದಗಳಿಂದ ಬೈದು ಕೊಲೆ ಬೆದರಿಕೆ ಹಾಕಿದ ಇಬ್ಬರು ಯುವಕರ ಮೇಲೆ ಕುದುರೆಮುಖ ಠಾಣೆಯಲ್ಲಿ ದೂರು ನೀಡಲು ಮುಂದಾಗಿದ್ದರು. ಆದರೆ ಕುದುರೆಮುಖ ಪೊಲೀಸರು ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಕಳಸ ಇನ್ಸ್ ಪೆಕ್ಟರ್ ಕಚೇರಿಯಲ್ಲಿ ಮಧ್ಯರಾತ್ರಿಯವರೆಗೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ.

ಪಕ್ಕದ ಮನೆಯ ಯುವಕರು ತನ್ನೊಡನೆ ಅಸಭ್ಯ ವರ್ತನೆ ಮಾಡಿದ ವಿಡಿಯೋ ನೀಡಿದರೂ ಕುದುರೆಮುಖ ಪೊಲೀಸರು ದೂರು ದಾಖಲಿಸಿಕೊಳ್ಳಲಿಲ್ಲ. ಆದರೆ ಎಫ್.ಐ.ಆರ್. ದಾಖಲಾಗದೆ ಮನೆಗೆ ಹೋಗಲ್ಲವೆಂದು ಪಟ್ಟು ಹಿಡಿದ ಮಹಿಳೆ ಮಗುವಿಗೆ ಪೊಲೀಸ್ ಠಾಣೆಯಲ್ಲೇ ಊಟ ಮಾಡಿಸಿ ಮಲಗಿಸಿದ್ದಾರೆ. ಮಹಿಳೆಯ ಆಕ್ರೋಶ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯರಾತ್ರಿಯ ವೇಳೆಗೆ ಯುವಕರ ವಿರುದ್ಧ ಎಫ್.ಐ.ಆರ್. ದಾಖಲು ಮಾಡಿದ್ದಾರೆ. ಅಸಭ್ಯ ವರ್ತನೆ ಮಾಡಿದ ನವೀನ್, ಶ್ರೇಯಾಂಶ್ ವಿರುದ್ಧ ದೂರು ದಾಖಲಾಗಿದೆ.