'ಜುಲೈ 7ರಂದು ರಾಜ್ಯ ಬಜೆಟ್ ಮಂಡನೆ' - ಮುಖ್ಯಮಂತ್ರಿ

ರಾಜ್ಯ ಬಜೆಟ್ ಮಂಡನೆ - ಮುಖ್ಯಮಂತ್ರಿ

ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಲಿದ್ದು, ಜು. 7 ರಂದು ಬಜೆಟ್ ಮಂಡನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ , ಹಣಕಾಸು ಇಲಾಖೆ ಸಚಿವ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡುವರು. ರಾಜ್ಯಪಾಲರ ಭಾಷಣ ಕುರಿತು ಚರ್ಚೆ ನಂತರ ಜು. 7 ರ ಶುಕ್ರವಾರ ಬಜೆಟ್ ಮಂಡನೆ ಮಾಡಲಾಗುವುದು ಎಂದರು.

ಇನ್ನು ಬಜೆಟ್ ವಿಚಾರವಾಗಿ ಪೂರ್ವಭಾವಿ ಸಭೆಗಳು ನಡೆದಿಲ್ಲ. ‌ಹಾಗಾಗಿ ಈಗಲೇ ಬಜೆಟ್ ಗಾತ್ರದ ಬಗ್ಗೆ ನಿಖರವಾಗಿ ಹೇಳಲಾಗುವುದಿಲ್ಲ. ಬಿಜೆಪಿ ಸರ್ಕಾರ ಚುನಾವಣಾ ಪೂರ್ವದಲ್ಲಿ 2.43 ಲಕ್ಷ ಗಾತ್ರದ ಬಜೆಟ್ ಮಂಡನೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.