'ಮಂಗಳೂರು ಸಹಿತ ರಾಜ್ಯದ ನಾಲ್ಕು ಕಡೆ ಹಜ್ ಭವನ ನಿರ್ಮಾಣ' - ಜಮೀರ್

'ಮಂಗಳೂರು ಸಹಿತ ರಾಜ್ಯದ ನಾಲ್ಕು ಕಡೆ ಹಜ್ ಭವನ ನಿರ್ಮಾಣ' - ಜಮೀರ್

ಮಂಗಳೂರು, ಸೇರಿ ರಾಜ್ಯದ ನಾಲ್ಕು ಕಡೆ ಮುಂದಿನ ಐದು ವರ್ಷಗಳಲ್ಲಿ ಹಜ್ ಭವನ ನಿರ್ಮಾಣವಾಗಲಿದೆ ಎಂದು ವಸತಿ ಮತ್ತು ವಕ್ಫ್ ಸಚಿವ ಜಮೀರ್‌ ಅಹ್ಮದ್ ಖಾನ್ ಹೇಳಿದರು.

ಬೆಂಗಳೂರಿನ ಯಲಹಂಕದ ಹಜ್ ಭವನದಲ್ಲಿ ನಡೆದ ಹಜ್ ಯಾತ್ರಿಕರ ವಿಮಾನಯಾನ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು ಮಂಗಳೂರು, ಕಲಬುರಗಿ, ರಾಯಚೂರು, ಹುಬ್ಬಳ್ಳಿಯಲ್ಲಿ ಹಜ್ ಭವನ ನಿರ್ಮಾಣ ಆಗಲಿದೆ. ಸಿದ್ದರಾಮಯ್ಯ ಹಿಂದಿನ ಬಾರಿ ಸಿಎಂ ಆಗಿದ್ದಾಗ 100 ಕೋಟಿ ಅನುದಾನ ನೀಡಿದ್ದರು. ಈ ಬಾರಿ ಅಧಿಕಾರಕ್ಕೆ ಬಂದ ಎರಡೇ ದಿನಕ್ಕೆ ಹಜ್ ಭವನ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ ನೀಡಿದ್ದಾರೆ. ಮಾತ್ರವಲ್ಲದೇ ಮುಂದೆ ಒಟ್ಟು 5 ಸಾವಿರ ಕೋಟಿ ಅನುದಾನ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಎಂದರು

ಗ್ಯಾರಂಟಿ ಅನುಷ್ಠಾನದಿಂದ ಆರ್ಥಿಕ ಹೊರೆಯಾಗಿ 5 ಸಾವಿರ ಕೋಟಿ ಕಡಿತ ಮಾಡಬಹುದು ಎಂಬ ಆರೋಪದ ಬಗ್ಗೆ ಮಾತನಾಡಿದ ಸಚಿವರು, "5 ಸಾವಿರ ಕೋಟಿಗಿಂತ ಕಡಿಮೆ ಮಾಡಬಾರದು. ಅನುದಾನ ಕಡಿಮೆ ಮಾಡಬಾರದೆಂದು ಮುಸ್ಲಿಂ ಮುಖಂಡರ ಬೇಡಿಕೆ ಇದೆ. ಯಾವುದೇ ಕಾರಣಕ್ಕೂ ಅನುದಾನ ಕಡಿಮೆ ಮಾಡಬಾರದು" ಎಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದರು.