5 ಗ್ಯಾರಂಟಿಗಳ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್ ಕೊಡಲಿದೆ ಸರ್ಕಾರ.!

5 ಗ್ಯಾರಂಟಿಗಳ ಬೆನ್ನಲ್ಲೇ ಮದ್ಯಪ್ರಿಯರಿಗೆ ಶಾಕ್ ಕೊಡಲಿದೆ ಸರ್ಕಾರ.!

ರಾಜ್ಯದಲ್ಲಿ ಐದು ಗ್ಯಾರಂಟಿಗಳ ಘೋಷಣೆಯಾದ ಬೆನ್ನಲ್ಲೇ ಮದ್ಯಪ್ರಿಯರಿಗೆ ಸರ್ಕಾರ ಶಾಕ್ ಕೊಟ್ಟಿದೆ. ಇದೀಗ ಮದ್ಯದ ದರದಲ್ಲಿ ಪ್ರತಿ ಬಾಟಲ್‌ಗೆ ರೂ.10 ರಿಂದ 20ರವರೆಗೆ ಹೆಚ್ಚಳವಾಗಿದ್ದು, ಬಿಯರ್ ಸೇರಿದಂತೆ ಹಾರ್ಡ್ ಡ್ರಿಂಕ್ಸ್‌ಗಳ ಬೆಲೆಯಲ್ಲಿ ಹೆಚ್ಚಿಸುವ ಸಾಧ್ಯತೆ ಇದೆ.

ಇದೀಗ ಮದ್ಯದ ದರದಲ್ಲಿ ಪ್ರತಿ ಬಾಟಲ್‌ಗೆ ರೂ.10 ರಿಂದ 20ರವರೆಗೆ ಹೆಚ್ಚಿಸುವ ಶಿಫಾರಸ್ ಅನ್ನು ಅಬಕಾರಿ ಇಲಾಖೆ ಸರಕಾರದ ಮುಂದಿಡಲು ಸಜ್ಜಾಗಿದೆ ಎಂದು ಹೇಳಲಾಗುತ್ತಿದೆ.

ಬಿಯರ್ ಸೇರಿ ಹಾರ್ಡ್ ಡ್ರಿಂಕ್ಸ್‌ ಬೆಲೆಯಲ್ಲಿ ಹೆಚ್ಚಳವಾಗಲಿದೆ. ಬಡ್ ವೈಸರ್ ಬಿಯರ್ ದರ ರೂ.198 ರಿಂದ 220ಕ್ಕೆ ಹೆಚ್ಚಿಸುವ ಸಾಧ್ಯತೆ ಇದ್ದು, ಕಿಂಗ್ ಫಿಶರ್ ಬಿಯರ್ ದರವನ್ನು ರೂ.160ರಿಂದ 170ರೂ.ಗೆ ಏರಿಸಬಹುದು. ಯುಬಿ ಪ್ರೀಮಿಯಂ ದರ ರೂ.125ರಿಂದ 135, ಸ್ಟ್ರಾಂಗ್ ದರ ರೂ.130ರಿಂದ 135ಗೆ ಹೆಚ್ಚಳವಾಗಬಹುದು ಎನ್ನಲಾಗುತ್ತಿದೆ. ಈ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಸಿಗಬೇಕಾಗಿದೆ.