ಮಂಗಳೂರು: ವಾಹನ ಚಾಲಕರಿಗೆ ಶಾಕಿಂಗ್‌ ನ್ಯೂಸ್ - 222 ಮಂದಿ ಡ್ರೈವಿಂಗ್ ಲೈಸೆನ್ಸ್ ಕ್ಯಾನ್ಸಲ್.!

14 ದಿನದಲ್ಲಿ 222 ಚಾಲಕರ ಡಿಎಲ್ ರದ್ದು.!

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಸಂಚಾರ ಪೊಲೀಸರ ಕಾರ್ಯಾಚರಣೆ ವೇಳೆ ಸಂಚಾರ ನಿಯಮ ಉಲ್ಲಂಘಿಸಿ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ 222 ಮಂದಿ ಚಾಲಕ, ಸವಾರರ ವಾಹನ ಚಾಲನಾ ಪರವಾನಗಿ (ಡಿಎಲ್) ರದ್ದುಗೊಳಿಸಲು ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಿದೆ.

14 ದಿನದಲ್ಲಿ ಅಂದರೆ ಜುಲೈ 13 ರಿಂದ ಜುಲೈ 26 ರವರೆಗೆ ಪೊಲೀಸರು ನಡೆಸಿದ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದಿಂದ ಚಾಲನೆ ಮಾಡಿರುವ ಹಾಗೂ ಸಂಚಾರ ನಿಯಮ ಪಾಲನೆ ಮಾಡದೇ ಇರುವ ಸವಾರ/ಚಾಲಕರ ಮೇಲೆ ಕಟ್ಟುನಿಟ್ಟಿನ ಕ್ರಮವನ್ನು ಕೈಗೊಂಡು ಸವಾರ/ಚಾಲಕರಿಗೆ ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವುದು ಅಗತ್ಯವಿರುವ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿರುವ 222 ಚಾಲಕರ ಡಿಎಲ್ ರದ್ದು ಮಾಡುವಂತೆ ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಲಾಗಿದೆ.

ರ್‍ಯಾಶ್ ಡ್ರೈವಿಂಗ್ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲತೆ ಕುರಿತಂತೆ 113 ಪ್ರಕರಣ ದಾಖಲಾಗಿದ್ದು, ಪಾನಮತ್ತಾಗಿ ವಾಹನ ಚಾಲನೆ 1, ಸರಕು ಸಾಗಾಟ ವಾಹನಗಳಲ್ಲಿ ಪ್ರಯಾಣಿಕರ ಸಾಗಾಟ ಪ್ರಕರಣಗಳು -16, ವಾಹನ ಚಲಾಯಿಸುವಾಗ ಮೊಬೈಲ್ ಫೋನ್ ಬಳಕೆ - 4, ರೆಡ್ ಸಿಗ್ನಲ್ ಜಂಪಿಂಗ್ -5, ವಾಣಿಜ್ಯ ವಾಹನದಲ್ಲಿ ಪ್ರಯಾಣಿಕರ ಸಾಗಾಟ - 4, ಟ್ರಿಪಲ್ ರೈಡಿಂಗ್ ಪ್ರಕರಣ -3, ಹೆಲ್ಮೆಟ್ ಧರಿಸದೆ ಸಂಚಾರ -59, ಸೀಟ್ ಬೆಲ್ಟ್ ಹಾಕದೆ ಚಾಲನೆ -17 ಸೇರಿದಂತೆ ಒಟ್ಟು 222 ಮಂದಿಯ ಡಿಎಲ್ ರದ್ದತಿಗೆ ಸಾರಿಗೆ ಇಲಾಖೆಗೆ ಶಿಫಾರಸ್ಸು ಮಾಡಲಾಗಿದೆ.