ಮಂಗಳೂರು: ಪತ್ರಕರ್ತನ ಮೇಲೆ ದೌರ್ಜನ್ಯ - ಇಬ್ಬರ ಬಂಧನ…!

ಪತ್ರಕರ್ತನ ಮೇಲೆ ನೈತಿಕ ಪೊಲೀಸ್‌ಗಿರಿ – ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ರೆಸ್ಟೋರೆಂಟ್‌ವೊಂದರಲ್ಲಿ ಪತ್ರಕರ್ತರೊಬ್ಬರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತರನ್ನು ಕೋಟೆಕಾರು ನಿವಾಸಿ ಚೇತನ್ (37) ಮತ್ತು ಯೆಯ್ಯಾಡಿ ನಿವಾಸಿ ನವೀನ್ (43) ಎಂದು ಗುರುತಿಸಲಾಗಿದೆ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಖಾಸಗಿ ವೆಬ್‌ಸೈಟ್ ವರದಿಗಾರ ಅಭಿಜಿತ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ಪ್ರಕಾರ, ಜುಲೈ 28 ರಂದು, ಅಭಿಜಿತ್ ತನ್ನ ಸ್ನೇಹಿತನೊಂದಿಗೆ ರೆಸ್ಟೋರೆಂಟ್‌ಗೆ ಹೋಗಿದ್ದರು, ಮತ್ತು ಆರೋಪಿಗಳು ಬಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭ ಅಭಿಜಿತ್ ತಾನು ವೆಬ್‌ಸೈಟ್‌ವೊಂದರ ವರದಿಗಾರನೆಂದು ತನ್ನ ಐಡಿ ಕಾರ್ಡ್ ತೋರಿಸಿದರೂ ಅಪರಿಚಿತ ವ್ಯಕ್ತಿ ಮತ್ತೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸದ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ಧಾರೆ.