ಮಂಗಳೂರು: 90 ಲಕ್ಷ ಮೌಲ್ಯದ ಅಂಬರ್ ಗ್ರೀಸ್ ವಶ – ಮೂವರು ಅರೆಸ್ಟ್.!

90 ಲಕ್ಷ ರೂ. ಮೌಲ್ಯದ ತಿಮಿಂಗಿಲ ವಾಂತಿ ಹೊಂದಿದ್ದ ಮೂವರ ಬಂಧನ

ಮಂಗಳೂರು: ಮಂಗಳೂರು ಪಣಂಬೂರು ಬೀಚ್ ಪರಿಸರದಲ್ಲಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಡುಪಿಯ ಸಾಲಿಗ್ರಾಮ ನಿವಾಸಿ ಜಯಕರ, ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ ಆದಿತ್ಯ, ಹಾವೇರಿ ಜಿಲ್ಲೆಯ ನಿವಾಸಿ ಲೋಹಿತ್ ಕುಮಾರ್ ಗುರಪ್ಪನವರ್ ಎಂದು ಗುರುತಿಸಲಾಗಿದೆ.

ಮಂಗಳೂರು ನಗರದ ಪಣಂಬೂರು ಬೀಚ್ ಪರಿಸರದಲ್ಲಿ ಕೋಟ್ಯಾಂತರ ಬೆಲೆಬಾಳುವ ಅಪರೂಪದ ವನ್ಯ ಜೀವಿ ಉತ್ಪನ್ನವಾದ ಅಂಬರ್ ಗ್ರೀಸ್(ತಿಮಿಂಗಲ ವಾಂತಿ)ನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಮೂವರು ವ್ಯಕ್ತಿಗಳನ್ನು ಸಿ.ಸಿ.ಬಿ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ ಸೆರೆ ಹಿಡಿಯುವುದಲ್ಲಿ ಯಶಸ್ವಿಯಾಗಿರುತ್ತಾರೆ. 900 ಗ್ರಾಂ ತೂಕದ 90 ಲಕ್ಷ ಬೆಲೆಬಾಳುವ ಅಂಬರ್ ಗ್ರೀಸನ್ನು ಈ ಮೂವರ ಬಳಿಯಿಂದ ವಶಪಡಿಸಿಕೊಳ್ಳಲಾಗಿದೆ. ಈ ದಾಳಿಯು ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ರವರ ಮಾರ್ಗದರ್ಶನದಲ್ಲಿ ಸಿ.ಸಿ.ಬಿ ಘಟಕದ ಅಧಿಕಾರಿ ಹಾಗೂ ಸಿಬ್ಬಂದಿಯವರು ನಡೆಸಿರುತ್ತಾರೆ.