ಕುಕ್ಕರ್ ಬಾಂಬ್-ಐಸಿಸ್ ನೆಟ್ವರ್ಕ್-ಮಾಸ್ಟರ್ ಮೈಂಡ್ ಅರೆಸ್ಟ್

ಮಂಗಳೂರು ಕುಕ್ಕರ್ ಸ್ಪೋಟದ ರೂವಾರಿ ಅರಾಫತ್ ಅಲಿ ಅರೆಸ್ಟ್

 

ಮಲೆನಾಡು ಸೇರಿದಂತೆ ಕರ್ನಾಟಕದಲ್ಲಿನ ಭಯೋತ್ಪಾದನಾ ಚಟುವಟಿಕೆ ಕಿಂಗ್ ಪಿನ್ ಆಗಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನಾಗಿದ್ದ ಆರೋಪಿ ಅರಾಫತ್ ಅಲಿ ಎಂಬಾತನನ್ನು ಎನ್​ಐಎ ಪೊಲೀಸರು ಬಂಧಿಸಿದ್ದಾರೆ.

ಶಿವಮೊಗ್ಗ ಮೂಲದ ಭಯೋತ್ಪಾದಕ ಸಂಚುಗಾರ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ ತಂಡ (ಎನ್​ಐಎ) ಪೊಲೀಸರು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಮೂಲತಃ ತೀರ್ಥಹಳ್ಳಿ ಮೂಲದ ಅರಾಫತ್ ಅಲಿ 2020ರ ಬಳಿಕ ತಲೆಮರೆಸಿಕೊಂಡಿದ್ದ.

2020ರಲ್ಲಿ ಕರ್ನಾಟಕದ ಮೋಸ್ಟ್ ವಾಂಟೆಡ್ ಉಗ್ರ ಅಬ್ದುಲ್ ಮತೀನ್ ಜೊತೆಗೆ ಅರಾಫತ್ ಅಲಿ ದೇಶ ಬಿಟ್ಟು ಹೋಗಿದ್ದನು.  ಐಸಿಸ್ ಪ್ರಚಾರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಆರೋಪಿ. ಹಲವು ಭಯೋತ್ಪಾದಕ ಕೃತ್ಯಗಳಿಗೆ ಯೋಜಿಸಿದ್ದ. ಬಳಿಕ ಭಾರತ ವಿರೋಧಿ ಭಯೋತ್ಪಾದಕ ಅಜೆಂಡಾವನ್ನು ಉತ್ತೇಜಿಸಲು ವಿದೇಶದಿಂದ ಕಾರ್ಯಾಚರಣೆ ನಡೆಸುತ್ತಿದ್ದ.

ನೈರೋಬಿಯಾದಿಂದ ದೆಹಲಿಗೆ ವಾಪಾಸ್ ಆಗುತ್ತಿದ್ದಾಗ ಎನ್​ಐಎ ಬಲೆಗೆ ಬಿದ್ದಿದ್ದಾನೆ.  ಈತ ನೇರವಾಗಿ ಎಲ್ಲಿಯೂ ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗದಿದ್ದರೂ, ಮಂಗಳೂರು ಕುಕ್ಕರ್ ಬಂದ್ ಸ್ಪೋಟದ , ಶಿವಮೊಗ್ಗ ಭಯೋತ್ಪಾದನೆ ಸಂಚು ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅಲ್ಲದೇ ಮಂಗಳೂರಿನ ಕದ್ರಿ ಮಂಜುನಾಥ ದೇಗುಲದ ಬಳಿ ಸ್ಪೋತ ನಡೆಸುವ ಸಲುವಾಗಿ ಕುಕ್ಕರ್ ಬಾಂಬ್ ತೆಗೆದುಕೊಂಡು ಹೋಗಿದ್ದ ಮೊಹಮ್ಮದ್ ಶಾರೀಖ್ ಜತೆಯೂ ಸಂಪರ್ಕದಲ್ಲಿದ್ದ ಎಂದು ಎನ್ ಐಎ ತಿಳಿಸಿದೆ.