ಬಂಟ್ವಾಳ: ಬಿಜೆಪಿ ಕಾರ್ಯಕರ್ತ ಕುಸಿದು ಬಿದ್ದು ಮೃತ್ಯು

ಚಿಕಿತ್ಸೆಗೆ ಬಂದು ಆಸ್ಪತ್ರೆಯಲ್ಲಿ ಕುಸಿದು ಸಾವನ್ನಪ್ಪಿದ ಪ್ರಕಾಶ್ ಬೆಳ್ಳೂರು

ಬಂಟ್ವಾಳ: ಔಷಧಕ್ಕೆ ಬಂದ ವ್ಯಕ್ತಿ ಕುಸಿದು ಬಿದ್ದು ಮೃತ ಪಟ್ಟ  ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಸರ್ಕಾರಿ ಆಸ್ಪತ್ತೆಯಲ್ಲಿ ನಡೆದಿದೆ.

ಬಿಜೆಪಿ ಸಕ್ರಿಯ ಯುವ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿ.

ಅಮ್ಟಾಡಿ ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಔಷಧಿಗೆಂದು ಅವರು ಇಂದು‌ ಬೆಳಿಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು ಎಂದು ಹೇಳಲಾಗಿದೆ.ಈ ವೇಳೆ ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಜ್ವರದಿಂದ ಬಳಲುತ್ತಿದ್ದ ಪ್ರಕಾಶ್ ಅವರು ಯಾವ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂಬುದರ ಬಗ್ಗೆ ಸ್ಪಷ್ಟವಾದ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಶಾಸಕ ರಾಜೇಶ್ ನಾಯ್ಕ್ ಸಹಿತ ಅನೇಕ ಬಿಜೆಪಿ ಪ್ರಮುಖರು ಬಂಟ್ವಾಳ ಆಸ್ಪತ್ರೆಗೆ ಧಾವಿಸಿ ಬಂದಿದ್ದಾರೆ.