ಉಡುಪಿ: ಮನೆಯಿಂದ ಹೊರ ಹೋದ ಯುವತಿ ನಾಪತ್ತೆ.!

ಯುವತಿ ನಾಪತ್ತೆ - ಪತ್ತೆಗಾಗಿ ಕೋರಿಕೆ

ಉಡುಪಿ: ಮನೆಯಿಂದ ಹೊರಗೆ ಹೋಗಿದ್ದ ಯುವತಿ ನಾಪತ್ತೆ ನಾಪತ್ತೆಯಾದ ಘಟನೆ ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   

 ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ನಾಪತ್ತೆಯಾದ ಯುವತಿ. 

ಉಡುಪಿ ತಾಲೂಕು 76-ಬಡಗುಬೆಟ್ಟು ಗ್ರಾಮದ ಬೀಡಿನಗುಡ್ಡೆ ಶಂಕರಶೆಟ್ಟಿ ಕಂಪೌಂಡ್‌ನ ಬಾಡಿಗೆ ಮನೆಯ ನಿವಾಸಿ ಜಯಶ್ರೀ ರಾಠೋಡ್ ಅಲಿಯಾಸ್ ಪೂಜಾ ಎಂಬ ಯುವತಿಯು ಅಕ್ಟೋಬರ್ 1 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 4 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಹಾಗೂ ಲಂಬಾಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.