ಕಾಸರಗೋಡು: ವಿವಾಹದ ಭರವಸೆ ನೀಡಿ ಮೂರು ವರ್ಷಗಳಲ್ಲಿ ಲೈಂಗಿಕ ಕಿರುಕುಳ - ಯುವಕ ಅರೆಸ್ಟ್

ಕಾಸರಗೋಡು: ವಿವಾಹದ ಭರವಸೆ ನೀಡಿ ಮೂರು ವರ್ಷಗಳ ಕಾಲ ಲೈಂಗಿಕ ಕಿರುಕುಳ - ಯುವಕ ಅರೆಸ್ಟ್

ವಿವಾಹ ಭರವಸೆ ನೀಡಿ ಯುವತಿಗೆ ಕಿರುಕುಳ ನೀಡಿದ ದೂರಿನ ಅನ್ವಯ ಬಿಗ್ ಬಾಸ್ ಸ್ಪರ್ಧಿ ಶಿಯಾಝ್ ಕರೀಂ (34)ನನ್ನು ಕಾಸರಗೋಡು ಚಂದೇರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಎರ್ನಾಕುಲಂ ನ ಜಿಮ್ ವೊಂದರಲ್ಲಿ ಕೆಲಸಕ್ಕಿದ್ದ ಯುವತಿಗೆ ವಿವಾಹವಾಗುವ ಭರವಸೆ ನೀಡಿ ಹಲವು ಕಡೆಗಳಿಗೆ ಕರೆದೊಯ್ದು ಕಿರುಕುಳ ನೀಡಿದ್ದಾನೆ. ಶಿಯಾಝ್ ಸುಮಾರು 11 ಲಕ್ಷ ರೂ. ಪಡೆದು ವಂಚಿಸಿದ್ದಾಗಿ ದೂರಿನಲ್ಲಿ ತಿಳಿಸಲಾಗಿದೆ. 2021 ರಿಂದ 2023 ರ ತನಕ ಮೂರು ವರ್ಷಗಳಲ್ಲಿ ಎರ್ನಾಕುಲಂ, ಮುನ್ನಾರ್ ರೆಸಾರ್ಟ್ ಹಾಗೂ ಇನ್ನಿತರ ಕಡೆಗಳಿಗೆ ಕರೆದೊಯ್ದು ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಳು. 

ವಿದೇಶದಿಂದ ಬಂದಿಳಿದ ಶಿಯಾಝ್ ನನ್ನು ಕಾಸರಗೋಡು ಪೊಲೀಸರು ಚೆನ್ನೈ ವಿಮಾನ ನಿಲ್ದಾಣದಿಂದ ಬಂಧಿಸಿದ್ದಾರೆ. ಶಿಯಾಝ್ ವಿರುದ್ಧ ಪೊಲೀಸರು ಲುಕ್ ಔಟ್ ನೋಟಿಸ್ ಬಿಡುಗಡೆ ಗೊಳಿಸಲಾಗಿತ್ತು. ಕಾಸರಗೋಡು ಪಡನ್ನ ದ 32 ರ ಹರೆಯದ ಯುವತಿ ನೀಡಿದ ದೂರಿನಂತೆ ಚಂದೇರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಶಿಯಾಝ್ ಬಿಗ್ ಬಾಸ್ ರಿಯಾಲಿಟಿ ಶೋ ಗಳಲ್ಲಿ ಪಾಲ್ಗೊಂಡಿದ್ದರು. ಈ ನಡುವೆ ಬೇರೆ ಯುವತಿಯ ಜೊತೆ ವಿವಾಹ ನಿಶ್ಚಯ ಕುರಿತು ಶಿಯಾಝ್ ಸಾಮಾಜಿಕ ಜಾಲತಾಣ ಗಳಲ್ಲಿ ಪ್ರಕಟಿಸಿದ್ದು, ವಿವಾಹ ಭರವಸೆ ನೀಡಿ ತನ್ನನ್ನು ವಂಚಿಸಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು ಲಭಿಸಿತ್ತು.