ಪುತ್ತೂರು: ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಗಡಿಪಾರು ಶಾಕ್ .!

ಹಿಂದೂ ಜಾಗರಣ ವೇದಿಕೆಯ ಸಕ್ರೀಯ ಕಾರ್ಯಕರ್ತ ಪ್ರವೀಶ್ ಕುಮಾರ್‌ಗೆ ಗಡಿಪಾರು ನೋಟಿಸ್

ತ್ತೂರು : ಹಿಂದೂ ಭದ್ರಕೋಟೆಯಾಗಿರುವ ಕರಾವಳಿಯಲ್ಲಿ ಹಿಂದೂ ಪರ ಸಂಘಟನೆಯ ನಾಯಕರಿಗೆ ಗಡಿಪಾರು ನೋಟೀಸ್ ಜಾರಿ ಮಾಡುವ ಮೂಲಕ ಕೆಲವು ಸಮಯಗಳಿಂದ ಹೊಸ ಶಾಕ್ ನೀಡುತ್ತಿರುವ ಘಟನೆ ನಡೆಯುತ್ತಿದ್ದು, ಇದೀಗ ಮತ್ತೋರ್ವ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್ ಜಾರಿ ಮಾಡಲಾಗಿದೆ.

ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೀಶ್ ಕುಮಾರ್ ನಾಯರ್ ವಿರುದ್ಧ ಪುತ್ತೂರು ಸಹಾಯಕ ಆಯುಕ್ತರು ಗಡಿಪಾಡು ಯಾಕೆ ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ.

ಪ್ರಸ್ತುತ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಕಾರ್ಯಕರ್ತ. ಡಿಸೆಂಬರ್ 20 ರಂದು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ನಡೆಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪದೇ ಪದೇ ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್ ಜಾರಿ ಮಾಡುವ ಮೂಲಕ ಹಿಂದೂ ಸಂಘಟನೆಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ಧ ಪೊಲೀಸರು ಗಡಿಪಾರು ಅಸ್ತ್ರ ಪ್ರಯೋಗಿಸುತ್ತಲೇ ಇದೆ. ತಿಂಗಳ ಹಿಂದೆಯಷ್ಟೇ ಐವರು ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದ್ದ ಪುತ್ತೂರು ಪೊಲೀಸರು, ಇದೀಗ  ಪ್ರವೀಶ್ ಕುಮಾರ್ ಗೆ ನೋಟಿಸ್  ಜಾರಿ ಮಾಡಿದ್ದಾರೆ.