ಕಾಣಿಯೂರು: ಅಪಪ್ರಚಾರಕ್ಕೆ ಮನನೊಂದ ಯುವತಿ ನೇಣು ಬಿಗಿದು ಜೀವಾಂತ್ಯ.!

ಆತ್ಮಹತ್ಯೆಗೆ ಶರಣಾದ ಯುವತಿ

ಕಾಣಿಯೂರು : ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾ.03 ರಂದು ಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ

ಕಾಣಿಯೂರು ಗ್ರಾಮದ ಅನಿಲ ಮನೆ ಪದ್ಮಯ್ಯ ಗೌಡ ಅವರ ಪುತ್ರಿ ದಿವ್ಯಾ ಶ್ರೀ(26) ಮೃತಪಟ್ಟವರು.

ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದು, ತಕ್ಷಣ ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಯುವತಿ ಮೃತಪಟ್ಟರೆನ್ನಲಾಗಿದೆ. ಮೇಲ್ನೋಟಕ್ಕೆ ಅಪಪ್ರಚಾರಕ್ಕೆ ಮನನೊಂದು ಯುವತಿ ಜೀವಾಂತ್ಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯುವತಿಯ ತಂದೆ ಪದ್ಮಯ್ಯ ಗೌಡ ಅನಿಲ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದು,್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.