ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ 170 ವಿದ್ಯಾರ್ಥಿಗಳು ಗೈರು

ಕಬ್ಬಿಣ ಕಡಲೆಯಾಯಿತೇ ಆಂಗ್ಲ ಪರೀಕ್ಷೆ..?

ರಾಜ್ಯಾದ್ಯಂತ 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಬುಧವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ 170 ವಿದ್ಯಾರ್ಥಿಗಳು ಗೈರಾಗಿದ್ದಾರೆ. 

ಈ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 35753 ವಿದ್ಯಾರ್ಥಿಗಳ ಪೈಕಿ 35,533 ಮಂದಿ ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇನ್ನು ರಾಜ್ಯಾದ್ಯಂತ ಆಂಗ್ಲ ಪರೀಕ್ಷೆಗೆ 20 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಪರೀಕ್ಷೆಗೆ 6,64,395 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 6,43,659 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. 20,736 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದು, ಶೇ.96.88ರಷ್ಟು ಹಾಜರಾತಿ ದಾಖಲಾಗಿದೆ. ಮೈಸೂರು ಜಿಲ್ಲೆಯಲ್ಲಿ 2346 ವಿದ್ಯಾರ್ಥಿಗಳು, ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 1,183, ವಿಜಯಪುರ ಜಿಲ್ಲೆಯಲ್ಲಿ 1,123, ಕಲಬುರಗಿ ಜಿಲ್ಲೆಯಲ್ಲಿ 1,225, ರಾಯಚೂರು ಜಿಲ್ಲೆಯಲ್ಲಿ 1,197 ವಿದ್ಯಾರ್ಥಿಗಳು ಗೈರಾಗಿದ್ದಾರೆ.