ಎಪ್ರಿಲ್ 24ಕ್ಕೆ ಫೈರ್ ಬ್ರಾಂಡ್ ಯೋಗಿ ಆದಿತ್ಯನಾಥ್ ಮಲ್ಪೆಗೆ.!

ಸಿಎಂ ಯೋಗಿ ಆದಿತ್ಯನಾಥ್ ಮಲ್ಪೆಗೆ

ಉಡುಪಿ : ಮತದಾನಕ್ಕೆ ಇನ್ನು ಕೆಲವೇ ದಿನಗಳು ಮಾತ್ರ ಉಳಿದಿದ್ದು ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಟಕ್ಕರ್ ನೀಡಲು  ಬಿಜೆಪಿಯ ಘಟಾನುಘಟಿ ನಾಯಕರು ರಾಜ್ಯಕ್ಕೆ ಆಗಮಿಸಲಿದ್ದು ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಉತ್ತರ ಪ್ರದೇಶದ ಫೈರ್ ಬ್ರಾಂಡ್ ಸಿಎಂ ಯೋಗಿ ಆದಿತ್ಯನಾಥ್ ಏ. 24ರಂದು ಉಡುಪಿಗೆ ಆಗಮಿಸಲಿದ್ದಾರೆ .  ಸಂಜೆ 4ಕ್ಕೆ ಮಲ್ಪೆಯ ಸಮುದ್ರ ತೀರದಲ್ಲಿ ಸಾರ್ವಜನಿಕ ರಾಲಿಯಲ್ಲಿ ಮಾತನಾಡಲಿದ್ದಾರೆ. ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ತಿಳಿಸಿದ್ದಾರೆ. 

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ ಏ. 20ಕ್ಕೆ, ಅಮಿತ್ ಶಾ ಏ. 23 ಮತ್ತು 24 ರಾಜ್ಯಕ್ಕೆ ಆಗಮಿಲಿದ್ದಾರೆ. ಜೆ.ಪಿ.ನಡ್ಡಾ ಮತ್ತು ರಾಜನಾಥ್ ಸಿಂಗ್ ಅವರ ದಿನಾಂಕ ನಿಗದಿ ಆಗಬೇಕಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಏ. 20ರಂದು ಮಧ್ಯಾಹ್ನ 3.30ಕ್ಕೆ ಚಿಕ್ಕಬಳ್ಳಾಪುರದಲ್ಲಿ ಮತ್ತು ಸಂಜೆ 5.30ಕ್ಕೆ ಬೆಂಗಳೂರು ಅರಮನೆ ಮೈದಾನದಲ್ಲಿ ‘ವಿಜಯ ಸಂಕಲ್ಪ’ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ.

ಗೃಹ ಸಚಿವ ಅಮಿತ್ ಶಾ ಏ. 23ರಂದು ಬೆಳಗ್ಗೆ 10ಕ್ಕೆ ಯಶವಂತಪುರದಲ್ಲಿ ರೋಡ್ ಶೋ, 12.30ಕ್ಕೆ ಯಲಹಂಕದಲ್ಲಿ ಸಾರ್ವಜನಿಕ ಸಭೆ, ಸಂಜೆ 4ಕ್ಕೆ ಬೊಮ್ಮನಹಳ್ಳಿಯಲ್ಲಿ ರೋಡ್ ಶೋ, ರಾತ್ರಿ 7ಕ್ಕೆ ಮಹದೇವಪುರದಲ್ಲಿ ರೋಡ್ ಶೋ ಮಾಡಲಿದ್ದಾರೆ. ಏ. 24ರಂದು ಬೆಳಗ್ಗೆ 10ಕ್ಕೆ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಮಧ್ಯಾಹ್ನ 1ಕ್ಕೆ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಂಜೆ 5ಕ್ಕೆ ಹುಬ್ಬಳ್ಳಿಯಲ್ಲಿ ರೋಡ್ ಶೋನಲ್ಲಿ ಪಾಲ್ಗೊಳ್ಳುವರು ಎಂದು ಸುನಿಲ್‌ ಕುಮಾರ್‌ ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥ ಏ. 24ರಂದು ಬೆಳಗ್ಗೆ 10ಕ್ಕೆ ಆರ್.ಆರ್.ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಹಿಸಲಿದ್ದು,ಏ.21 ಮತ್ತು 28ರಂದು ‘ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 

ಏ.21ರಂದು ರಾಜ್ಯದ ವಿವಿಧೆಡೆ 15 ಲಕ್ಷಕ್ಕೂ ಹೆಚ್ಚು ಮೋದಿ ಅಭಿಮಾನಿಗಳು ಮತ್ತು ಬೆಂಬಲಿಗರು ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 21ರಂದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 24ರಂದು ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದರು.ವಿವಿಧ ಬಡಾವಣೆಗಳು, ಬೀದಿ, ಉದ್ಯಾನಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮೊದಲ ಹಂತದ ಚುನಾವಣೆ ನಡೆಯುವ 28 ಸಾವಿರ ಬೂತ್‌ಗಳಲ್ಲಿ ಪ್ರತಿಯೊಂದು ಬೂತ್‌ನಲ್ಲಿ ತಲಾ 50 ಕಾರ್ಯಕರ್ತರು ಕಾರ್ಯನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.