ಕೋವಿಶೀಲ್ಡ್​ ಪಡೆದವರು ತಂಪುಪಾನಿಯ, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ

ಕೋವಿಶೀಲ್ಡ್​ ಪಡೆದವರು ತಂಪುಪಾನಿಯ, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ

 

ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ​ ಲಸಿಕೆ ಪಡೆದವರು ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂಬುವುದು ಸುಳ್ಳು ಸುದ್ದಿಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ರೀತಿಯ ಸುದ್ದಿ ಸುಳ್ಳಾಗಿದ್ದು, ಇಂತಹ ಯಾವುದೇ ಸುತ್ತೋಲೆ ಇಲಾಖೆ ಹೊರಡಿಸಿಲ್ಲ. ಗಾಬರಿ ಗೊಳ್ಳದಿರಿ, ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ರೀತಿ ಸೂಚನೆ ನೀಡಿರುವ ಕಾಲೇಜುಗಳಿಗೆ ಕಾರಣ ಕೇಳಿ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.

ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ, ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತಯ ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್​​ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಢೀರ್​ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುತ್ತಿದೆ. ಹೀಗಾಗಿ ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಎಂದು ಖಾಸಗಿ ಕಾಲೇಜು ಸುತ್ತೋಲೆ ಹೊರಡಿಸಿತ್ತು.

ಖಾಸಗಿ ಕಾಲೇಜೊಂದು ಈ ರೀತಿಯಾಗಿ ನೋಟಿಸ್​ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಹರದಾಡಲು ಆರಂಭಿಸಿತು. ಇದರಿಂದ ಎಚ್ಚತ್ತ ಆರೋಗ್ಯ ಇಲಾಖೆ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ.