2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ 63,1204 (7691 %) ಫಲಿತಾಂಶ ಸಾಧಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಜಿಲ್ಲಾವಾರು ಫಲಿತಾಂಶವನ್ನು ಪ್ರಕಟ ಗೊಳಿಸಿದೆ. ಉಡುಪಿ ಜಿಲ್ಲೆ(94%) ಪ್ರಥಮ ಸ್ಥಾನ ಪಡೆದಿದೆ.
ಗ್ರಾಮೀಣ ಮತ್ತು ಸರ್ಕಾರಿ ಶಾಲಾ ಮಕ್ಕಳ ಉತ್ತನ ಸಾಧನೆ ಮಾಡಿದ್ದು, ಬಾಲಕರು – 2,87,416 ಹಾಗೂ ಬಾಲಕಿಯರು – 3,43,788 ಪಾಸ್ ಆಗಿದ್ದಾರೆ. ಕರ್ನಾಟಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ವೀಕ್ಷಿಸಬಹುದು.
ರಾಜ್ಯದಲ್ಲಿ 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 2023-24 ನೇ ಸಾಲಿನ ಶೇಕಡಾವಾರು ಫಲಿತಾಂಶ 70.40ಕ್ಕೆ ಕುಸಿತವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.10 ಪರ್ಸೆಂಟ್ ಕುಸಿತವಾಗಿದೆ. ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಟಾಪರ್. 625ಕ್ಕೆ 625 ಅಂಕ ಪಡೆದುಕೊಂಡಿದ್ದಾಳೆ.
ಪ್ರಸ್ತುತ 2023-24ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ಸೈಟ್ karresults.nic.in ಅಥವಾ kseab.karnataka.gov.in ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ರಾಜ್ಯಾದ್ಯಂತ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ ವತಿಯಿಂದ ಮಾರ್ಚ್ 25 ಮತ್ತು ಏಪ್ರಿಲ್ 6ರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಫಲಿತಾಂಶ ಹೊರ ಬಿದ್ದಿದೆ. ಈ ಪೈಕಿ ಬಾಗಲೋಕೋಟೆಯ ಅಂಕಿತಾ ರಾಜ್ಯಕ್ಕೆ ಟಾಪರ್. 625ಕ್ಕೆ 625 ಅಂಕ ಪಡೆದುಕೊಂಡಿದ್ದಾಳೆ.
ಲಿಂಗವಾರು ಒಟ್ಟಾರೆ ಫಲಿತಾಂಶ:
ಬಾಲಕರು: 2,87,416 (65.90%)
ಬಾಲಕಿಯರು; 3,43,788 (81.11%)
SSLC ಪರೀಕ್ಷೆಯಲ್ಲಿ ಬಾಲಕಿಯರ ಮೇಲುಗೈ ಸಾಧಿಸಿದ್ದಾರೆ.
ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ :
1) ಉಡುಪಿ - ಪ್ರಥಮ ಸ್ಥಾನ (94%)
2) ದಕ್ಷಿಣ ಕನ್ನಡ - ದ್ವೀತಿಯ ಸ್ಥಾನ(92.12%)
3) ಶಿವಮೊಗ್ಗ- ತೃತೋಯ ಸ್ಥಾಮ (88.67%)
ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲ್ಲೆ ಯಾದಗಿರಿ ಶೇ.50.59 ಫಲಿತಾಂಶ ಪಡೆದಿದೆ.