SSLC RESULT: ಬೆಳ್ತಂಗಡಿಯ ಚಿನ್ಮಯ್ ರಾಜ್ಯಕ್ಕೆ ದ್ವಿತೀಯ, ಕಾರ್ಕಳದ ಸಹನಾ ತೃತೀಯ

ಅಂಕಿತಾ ಪ್ರಥಮ,ಚಿನ್ಮಯ್ ದ್ವಿತೀಯ, ಸಹನಾ ತೃತೀಯ

ಮಂಗಳೂರು : 2023 - 24 ನೇ ಸಾಲಿನ ಎಸೆಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಉಡುಪಿ ಜಿಲ್ಲೆ ಈ ಬಾರಿ 94% ಫಲಿತಾಂಶದೊಂದಿಗೆ ಪ್ರಥಮ ಸ್ಥಾನದಲ್ಲಿದೆ. ದಕ್ಷಿಣ ಕನ್ನಡ ದ್ವಿತೀಯ ಸ್ಥಾನದಲ್ಲಿದೆ.

ಬಾಗಲಕೋಟೆ ಜಿಲ್ಲೆಯ ಮುಧೋಳದ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರು 625/625ಕ್ಕೆ ಅಂಕ ಪಡೆದುಕೊಳ್ಳುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಒಟ್ಟು 7 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಈ ಪೈಕಿ ಬೆಳ್ತಂಗಡಿ ಎಸ್.ಡಿ. ಎಂ ಪ್ರೌಢಶಾಲಾ ವಿದ್ಯಾರ್ಥಿ ಚಿನ್ಮಯ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಕಾರ್ಕಳ ತಾಲೂಕು ಕುಕ್ಕುಂದೂರಿನ ಜ್ಞಾನಸುಧಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸಹನಾ 623 ಅಂಕ ಪಡೆದು ರಾಜ್ಯಕ್ಕೆ ಮೂರನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.