ಪುತ್ತೂರು: ಕುಡಿದ ಮತ್ತಿನಲ್ಲಿ ತಮ್ಮನ ಕೊಂದೆಬಿಟ್ಟ ಅಣ್ಣ

ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ಘಟನೆ...

ಪುತ್ತೂರು: ಕುಡಿದ ಮತ್ತಿನಲ್ಲಿ ಅಣ್ಣನೊಬ್ಬ ತಮ್ಮನನ್ನು ಕೊಲೆ ಮಾಡಿರುವ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ಡಿಸೆಂಬರ್ 1 ರಂದು ರಾತ್ರಿ ನಡೆದಿದೆ.

ಕೊಲೆಯಾದವನನ್ನು ಮಾದೇವಪ್ಪ ಎಂದು ಗುರುತಿಸಲಾಗಿದ್ದು, ಹಾವೇರಿ ಜಿಲ್ಲೆಯ ಹೊಸೂರು ನಿವಾಸಿ ನಿಂಗನ ಗೌಡ ಕೊಲೆ ಆರೋಪಿ. ಪುತ್ತೂರಿನ ಕೆಮ್ಮಿಂಜೆಯಲ್ಲಿ ಕಾರ್ಮಿಕ ಕೆಲಸ ಮಾಡುತ್ತಿದ್ದ ಸಹೋದರರಿಬ್ಬರು ನಿನ್ನೆ ರಾತ್ರಿ ಕಂಠಪೂರ್ತಿ ಕುಡಿದು ಜಗಳ ನಡೆಸಿದ್ದು, ಈ ವೇಳೆ ನಿಂಗನ ಗೌಡನು, ಮಾದೇವಪ್ಪನ ಮೇಲೆ ಹಲ್ಲೆ ಮಾಡಿದ್ದು, ಗಂಭೀರ ಗಾಯಗೊಂಡ ಆತ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ಬಳಿಕ ಆರೋಪಿ ನಿಂಗನ ಗೌಡ ಪರಾರಿಯಾಗಿದ್ದು, ಆರೋಪಿ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.