"ಗೂಂಡಾ ರಾಜಕೀಯ, ದೇಶವಿರೋಧಿ ಚಟುವಟಿಕೆಯನ್ನು ಬಿಜೆಪಿ ಸಹಿಸಲ್ಲ" - ನಳಿನ್‍ ಕುಮಾರ್ ಕಟೀಲ್

"ಗೂಂಡಾ ರಾಜಕೀಯ, ದೇಶವಿರೋಧಿ ಚಟುವಟಿಕೆಯನ್ನು ಬಿಜೆಪಿ ಸಹಿಸಲ್ಲ" - ನಳಿನ್‍ ಕುಮಾರ್ ಕಟೀಲ್

ಗೂಂಡಾ ರಾಜಕೀಯದಂಥ ದೇಶವಿರೋಧಿ ಚಟುವಟಿಕೆಯನ್ನು ಬಿಜೆಪಿಯು ಸಹಿಸುವುದಿಲ್ಲ ಹಾಗೂ ಒಪ್ಪಿಕೊಳ್ಳುವುದಿಲ್ಲ ಎಂದು ನಳಿನ್‍ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಮೊನ್ನೆ ಯಾವುದೋ ಒಂದು ಕಾರ್ಯಕ್ರಮದ ವೇದಿಕೆಯಲ್ಲಿ ನಮ್ಮವರು ಪಾಲ್ಗೊಂಡಿದ್ದನ್ನು ಗಮನಿಸಿದ್ದೇನೆ. ಆ ಕುರಿತಂತೆ ವಿವರಣೆ ಕೇಳಿದ್ದೇನೆ. ಯಾವುದೇ ಕಾರಣಕ್ಕೆ ಕ್ರಿಮಿನಲ್ ಹಿನ್ನೆಲೆ ಉಳ್ಳವರನ್ನು ಪಕ್ಷಕ್ಕೆ ಸೇರಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೇನೆ. ಇಲ್ಲಿಗೆ ಈ ವಿಷಯಕ್ಕೆ ಮುಕ್ತಾಯ ಹಾಕುತ್ತೇನೆ ಎಂದರು. ಇನ್ನು ಡಿ.ಕೆ ಶಿವಕುಮಾರ್ ಎಲ್ಲಿಂದ ರಾಜಕಾರಣಕ್ಕೆ ಬಂದರು ಎಂದು ನಾನೇನೂ ಬಹಿರಂಗ ಪಡಿಸಬೇಕಿಲ್ಲ. ಡಿ.ಕೆ.ಶಿವಕುಮಾರ್ ಇತಿಹಾಸ, ವ್ಯವಸ್ಥೆಗಳು, ರಕ್ತಸಿಕ್ತ ಕಾಂಗ್ರೆಸ್‍ನ ಚಟುವಟಿಕೆಗಳು ನನಗಿಂತ ಹೆಚ್ಚಾಗಿ ಬೆಂಗಳೂರಿನ ಜನರಿಗೆ ತಿಳಿಸಿದೆ ಎಂದು ಹೇಳಿದ್ದಾರೆ.