ಕಾರ್ಕಳ: ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ

ಕಾರ್ಕಳ: ಕಾರ್ಕಳದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತರನ್ನು ತೃತೀಯ ಬಿಎ ವಿದ್ಯಾರ್ಥಿನಿ ನಿಟ್ಟೆ ಗ್ರಾಮದ ಕೀರ್ತನಾ (19) ಎಂದು ಗುರುತಿಸಲಾಗಿದೆ. ಡಿ. 3ರ ಶನಿವಾರ ಇಂದು ಬೆಳಿಗ್ಗೆ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.