ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತ ಖಾಸಗಿ ಹೋಟೆಲ್‌ಗೆ ಅವಕಾಶ ನೀಡಬೇಡಿ: ಸರ್ಕಾರಕ್ಕೆ ವೀರೇಂದ್ರ ಹೆಗ್ಗಡೆ ಮನವಿ

ಧರ್ಮಸ್ಥಳ ಕ್ಷೇತ್ರದ ಸುತ್ತಮುತ್ತ ಖಾಸಗಿ ಹೋಟೆಲ್‌ಗೆ ಅವಕಾಶ ನೀಡಬೇಡಿ: ಸರ್ಕಾರಕ್ಕೆ ವೀರೇಂದ್ರ ಹೆಗ್ಗಡೆ ಮನವಿ

ಶ್ರೀ ಕ್ಷೇತ್ರ ಧರ್ಮಸ್ಥಳ ಸುತ್ತಮುತ್ತ ಖಾಸಗಿ ಹೋಟೆಲ್‌ಗಳಿಗೆ ಅವಕಾಶ ನೀಡಬೇಡಿ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

 ಧರ್ಮಸ್ಥಳ ದೇವಸ್ಥಾನದ ಒಂದೂವರೆ, ಎರಡು ಕಿಲೋ ಮೀಟರ್‌ ಸುತ್ತಮುತ್ತ ಖಾಸಗಿ ಹೊಟೇಲ್‌ಗಳಿಗೆ ಅವಕಾಶ ನೀಡಬೇಡಿ. ಮಾಂಸಹಾರ ಹೊಟೇಲ್‌ಗಳು ಬಂದರೆ ಬಾರ್‌ಗಳೂ ಬರುತ್ತವೆ. ನೇತ್ರಾವತಿ ನದಿ ಸೇರಿದಂತೆ, ಇತರ ನದಿಗಳ ಸುತ್ತ ಹೊಟೇಲ್‌ಗಳಿಗೆ ಅವಕಾಶ ನೀಡುವುದು ಬೇಡ. ಕ್ಷೇತ್ರದ ಪಾವಿತ್ರ್ಯತೆ ಕಾಪಾಡುವುದಕ್ಕೆ ಸರ್ಕಾರ ಸಹಕರಿಸಬೇಕು ಎಂದಿದ್ದಾರೆ.

ರಾಜ್ಯಸಭೆ ಅಧಿವೇಶನದ ಮೊದಲ ಭಾಷಣದಲ್ಲೂ ಈ ಬಗ್ಗೆ ಮಾತನಾಡುವುದಾಗಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳದ ಸುತ್ತ ಮೂರು ನದಿಗಳು ಬರುತ್ತವೆ. ‌ಈ ನದಿಗಳ ವ್ಯಾಪ್ತಿಯಲ್ಲಿ ಖಾಸಗಿ ಹೋಟೆಲ್, ವಸತಿ, ಬಾರ್‌ಗಳನ್ನು ತಲೆ ಎತ್ತದಂತೆ ಸರ್ಕಾರ ನೋಡಿಕೊಳ್ಳಬೇಕು. ಧರ್ಮಸ್ಥಳಕ್ಕೆ ಆಗಮಿಸುವ ಭಕ್ತರಿಗೆ ವಸತಿ ಸೌಲಭ್ಯ ಆಗಬೇಕು. ಆದರೆ ಮೋಜು ಮಸ್ತಿಗೆ ಧರ್ಮಸ್ಥಳದ ವ್ಯಾಪ್ತಿಯಲ್ಲಿ ಅವಕಾಶ ನೀಡಬಾರದು. ಕ್ಷೇತ್ರದ ಪಾವಿತ್ರ್ಯತೆ ಉಳಿಯಬೇಕು ಎಂದು ವೀರೇಂದ್ರ ಹೆಗ್ಗಡೆ ಮನವಿ ಮಾಡಿಕೊಂಡರು.