ಮಂಗಳೂರು: "ಹಿಂದು ಕಾರ್ಯಕರ್ತ ರಾಜೇಶ್ ಸುವರ್ಣ ಅನುಮಾನಾಸ್ಪದ ಸಾವು.!"

ನೇತ್ರಾವತಿ ನದಿಯಲ್ಲಿ ಶವ ಪತ್ತೆ

ಮಂಗಳೂರು: ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಕಲಡ್ಕ ಪ್ರಖಂಡದ ಗೋರಕ್ಷಕ ಪ್ರಾಮುಕ್ ಹಾಗೂ ಸಜೀಪ ವಿಶ್ವ ಹಿಂದೂ ಪರಿಷತ್‌ನ ಸಕ್ರಿಯ ಕಾರ್ಯಕರ್ತ ರಾಜೇಶ್ ಸುವರ್ಣ ಸಾನದಮನೆ ಇವರ ಮೃತದೇಹ ಪತ್ತೆಯಾಗಿದ್ದು, ಇವರ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. 

ಕಲಡ್ಕ ಪ್ರಖಂಡದ ಗೋರಕ್ಷಕ ಪ್ರಾಮುಕ್ ಹಾಗೂ ಸಜೀಪ ವಿಶ್ವ ಹಿಂದೂ ಪರಿಷತನ ಸಕ್ರಿಯ ಕಾರ್ಯಕರ್ತ ರಾಜೇಶ್ ಸುವರ್ಣ ಸಾನದಮನೆ ಇವರ ಮೃತದೇಹ ಇಂದು ಬೆಳಗ್ಗೆ ನೇತ್ರಾವತಿ ನದಿಯಲ್ಲಿ ಸಿಕ್ಕಿದ್ದು, ಆತ್ಮಹತ್ಯೆ ಎಂದು ಶಂಕಿಸಿದರು ಇದು ಅನುಮಾನಾಸ್ಪದ ಸಾವು ಎಂದು ಅಭಿಪ್ರಾಯಗಳು ಕೇಳಿ ಬಂದಿದೆ. ಇವರು ಸಮಾಜ ಮುಖಿ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದವರು. ಹಿಂದತ್ವದ ಪರ ನಿಷ್ಠೆಯಿಂದ ಸೇವೆ ಮಾಡಿದ್ದಾರೆ. ಇವರ ಸಾವಿನ ಬಗ್ಗೆ ಸರಿಯಾದ ತನಿಖೆ ನಡೆದು ಇವರ ಸಾವಿಗೆ ನ್ಯಾಯ ಸಿಗಬೇಕು ಎಂಬುವುದು ಹಲವರ ಅಭಿಪ್ರಾಯವಾಗಿದೆ. 

ಘಟನೆ ವಿವರ:

ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ದ್ವಿಚಕ್ರವಾಹನವೊಂದು ಪತ್ತೆಯಾದ ಹಿನ್ನೆಲೆ ಯಲ್ಲಿ ಸಂಶಯಗೊಂಡು ಪಾಣೆಮಂಗಳೂರು ಸೇತುವೆಯಲ್ಲಿ ಸಂಚರಿಸುವ ವಾಹನ ಸವಾರರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಆರಂಭದಲ್ಲಿ ನೇತ್ರಾವತಿ ನದಿಗೆ ಯಾರೋ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಅಂದಾಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅಗ್ನಿಶಾಮಕ ದಳ ಹಾಗೂ ಸ್ಥಳೀಯ ಮುಳುಗು ತಜ್ಞರ ತಂಡ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು, ಬಳಿಕ ರಾಜೇಶ್ ಪೂಜಾರಿಯ ಮೃತದೇಹ ಪತ್ತೆಯಾಗಿದೆ. ಆದರೆ ಮೃತದೇಹ ಪತ್ತೆಯಾದ ಬಳಿಕ ಸಾರ್ವಜನಿಕ ರಲ್ಲಿ ಸಾವಿನ ಬಗ್ಗೆ ಊಹಾಪೋಹಗಳು ಸಂದೇಹಗಳು ಹುಟ್ಟಿ ಕೊಂಡಿದೆ. ರಾಜೇಶ್ ಅವರು ಸಜೀಪ ಮನೆಯಿಂದ ಬರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ವೇಳೆ ಹಳೆಯ ಪಾಣೆಮಂಗಳೂರು ಸೇತುವೆಯಲ್ಲಿ ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿ ನೇತ್ರಾವತಿ ನದಿಗೆ ಬಿದ್ದು ಸಾವನ್ನಪ್ಪಿರಬಹುದಾ? ಎಂಬ ಸಂದೇಹ ವ್ಯಕ್ತವಾಗಿದೆ.

ದ್ವಿಚಕ್ರ ವಾಹನ ಅಪಘಾತ ವಾದ ಬಗ್ಗೆ ಸಂಶಯಗಳು ವ್ಯಕ್ತವಾಗಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ. ಅಥವಾ ಇನ್ನಾವುದೋ ಕಾರಣವಿರಬಹುದಾ ? ಎಂಬ ಬಗ್ಗೆಯೂ ಪೋಲೀಸರು ತನಿಖೆಗೆ ಮುಂದಾಗಿದ್ದಾರೆ.