ಕಡಬ: 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕಡಬ: 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಕಡಬ: 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರು ನಗರ ಠಾಣೆ ಪೊಲೀಸರು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಕ್ವೆ ನಿವಾಸಿ ಹರಿಪ್ರಸಾದ್ ಎಂಬಾತನೇ ಆರೋಪಿಯಾಗಿದ್ದು, ಕೊನೆಗೂ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.

ಆರೋಪಿ ವಿರುದ್ಧ ಸೆಕ್ಷನ್ 341, 326, 506 ಮತ್ತು I34 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪುತ್ತೂರು ಸಿಐ ರವಿ ಬಿ. ಎಸ್. ಹಾಗೂ ಕಡಬ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ ಅವರ ನಿರ್ದೇಶನದಂತೆ ಕಡಬ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ರಾಜು ನಾಯಕ್ ಮತ್ತು ಸಿರಾಜುದ್ದೀನ್ ಅವರು ಮೈಸೂರಿನಲ್ಲಿ ಆರೋಪಿಯನ್ನು ಪತ್ತೆ ಮಾಡಿದ್ದಾರೆ. ನ್ಯಾಯಾಲಯ ಆರೋಪಿ ಹರಿಪ್ರಸಾದ್ ಗೆ ಜನವರಿ 21ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.