ಉಡುಪಿ ವಿವಾದ : ಸಿಎಂ ವಿರುದ್ಧ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಅರೆಸ್ಟ್.!
ಸಿಎಂ ವಿರುದ್ಧ ಟ್ವೀಟ್‌ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಟ್ವಿಟ್ಟರ್ ನಲ್ಲಿ  ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. 

ಈ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಕೆಲವರು ರಾಜ್ಯಸರ್ಕಾರದ ಮೇಲೆ ಆರೋಪ ಮಾಡಿದರೆ ಇನ್ನೂ ಕೆಲವರು ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್​ ವಿರುದ್ಧ ಮಾತನಾಡುತ್ತಿದ್ದಾರೆ. ಈ ನಡುವೆ ಬಿಜೆಪಿಯ ಕಾರ್ಯಕರ್ತೆಯೊಬ್ಬರು, ಸಿದ್ದರಾಮಯ್ಯ ಮತ್ತು ಕುಟುಂಬ ವಿರುದ್ದ ಹಗುರವಾಗಿ ಮಾತನಾಡಿ ಜೈಲು ಸೇರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಟ್ವಿಟ್ಟರ್‌ನಲ್ಲಿ ಅವಾಚ್ಯ ಪದಗಳನ್ನು ಬಳಸಿ ಪೋಸ್ಟ್‌ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ವಿರುದ್ಧ ಹೈಗ್ರೌಂಡ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.ಈ ಹಿನ್ನೆಲೆಯಲ್ಲಿ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ಹನುಮಂತಯ್ಯ ಎಂಬ ಯುವ ಕಾಂಗ್ರೆಸ್​ ಕಾರ್ಯಕರ್ತ ನೀಡಿದ ದೂರಿನ ಅನ್ವಯ ಎಫ್ಐಆರ್ ದಾಖಲಿಸಿಕೊಳ್ಳಲಾಗಿದ್ದು, ಐಪಿಸಿ ಸೆಕ್ಷನ್ 509 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯ ಘನತೆಗೆ ಧಕ್ಕೆ ನೀಡಿದ ಆರೋಪದಡಿ ಕೇಸ್ ದಾಖಲಾಗಿದ್ದು ಹೈಗ್ರೌಂಡ್ಸ್ ಠಾಣೆಯಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾರ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ಬಿಜೆಪಿ ನಾಯಕರು ಭೇಟಿ ನೀಡಿದ್ದಾರೆ. ಮಾಜಿ ಸಂಸದ ಅಶ್ವಥ್ ನಾರಾಯಣ ಹಾಗೂ ಸಂಸದ ರವಿಕುಮಾರ್ ಭೇಟಿ ನೀಡಿದ್ದು ಶಕುಂತಲಾ ಬಂಧನದ ಬಗ್ಗೆ ಮಾಹಿತಿ ಪಡೆದಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!