ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್.!‌
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉರ್ವಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.

ಆರೋಪಿ ವಿಖ್ಯಾತ್ ವಿಕ್ಕಿ ಬಪ್ಪಲ್ (29) ಎಂಬಾತನನ್ನು ಉರ್ವಾ ಪೊಲೀಸರು ಬುಧವಾರ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಈತನಿಗೆ ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ, ಇತರ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ಇದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!