ಮಂಗಳೂರು: ಬಾಲಕಿಯ ಅಪಹರಣ - ಆರೋಪಿ ಬಂಧನ.!
ಅಪ್ರಾಪ್ತೆಯ ಅಪಹರಣ - ಸರ್ಫ್ರಾಝ್‌ ಅರೆಸ್ಟ್‌

ಮಂಗಳೂರು: ಪಣಂಬೂರು ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಣ ಮಾಡಿದ ಘಟನೆ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು ಹೊರ ವಲಯದ ಕಸ್ಬಾ ಬೆಂಗ್ರೆಯ ಮೊಹಮ್ಮದ್‌ ಸರ್ಫ್ರಾಝ್‌ (22) ಬಂಧಿತ ಆರೋಪಿ.

ಆತನ ವಿರುದ್ಧ ಅತ್ಯಾಚಾರ ಆರೋಪ ಮತ್ತು ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಆ. 10 ರಂದು ಅಪಹರಿಸಲಾಗಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ ಪುತ್ರಿಯನ್ನು ಆರೋಪಿ ಪುಸಲಾಯಿಸಿ ಕರೆದುಕೊಂಡು ಹೋಗಿರುವುದಾಗಿ ಬಾಲಕಿಯ ತಂದೆ ದೂರು ನೀಡಿದ್ದರು.

ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಕೆಲವೇ ಗಂಟೆಗಳಲ್ಲಿ ಬಾಲಕಿಯನ್ನು ಪತ್ತೆ ಹಚ್ಚಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಮೊಹಮ್ಮದ್‌ ಸರ್ಫ್ರಾಝ್‌ ಹಳೆ ಆರೋಪಿಯಾಗಿದ್ದು, ಕಂಕನಾಡಿ ನಗರ ಮತ್ತು ಬೈಂದೂರು ಪೊಲೀಸ್‌ ಠಾಣೆಗಳಲ್ಲಿ ಆತನ ವಿರುದ್ಧ ಮನೆ ದರೋಡೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!