ಉಪ್ಪಿನಂಗಡಿ: ಮಗಳ ಪಾಲಿಗೆ ವಿಲನ್ ಆದ ತಂದೆ; ಅಪ್ರಾಪ್ತೆ ಗರ್ಭಿಣಿ
ಉಪ್ಪಿನಂಗಡಿ: ಮಗಳ ಪಾಲಿಗೆ ವಿಲನ್ ಆದ ತಂದೆ; ಅಪ್ರಾಪ್ತೆ ಗರ್ಭಿಣಿ

ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಕೃತ್ಯ ಬೆಳಕಿಗೆ ಬಂದಿದೆ. ಉಪ್ಪಿನಂಗಡಿಯ ಗೋಳಿತ್ತೊಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿಯನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ.

ಗೋಳಿತ್ತೊಟ್ಟು ಗ್ರಾ.ಪಂ. ವ್ಯಾಪ್ತಿಯ ನಿವಾಸಿ ತನ್ನ ಮಗಳ ಮೇಲೆ ಕೆಲವು ತಿಂಗಳುಗಳ ಹಿಂದೆ ಅತ್ಯಾಚಾರ ಎಸಗಿದ್ದಾನೆ. , ಮಗಳ ಆರೋಗ್ಯದಲ್ಲಿ ಏರುಪೇರಾದಾಗ ತಾಯಿ ಮಗಳನ್ನು ಆ. ೧೬ರಂದು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮಗಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ.

ಬಳಿಕ ಸಂತ್ರಸ್ತೆ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು ಆರೋಪಿ ತಂದೆಯನ್ನು ಬಂಧಿಸಿದ್ದಾರೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!