ಉಡುಪಿ ಶೌಚಾಯದಲ್ಲಿ ಶೂಟಿಂಗ್ ವಿವಾದ: ಪ್ರಚೋದನಾತ್ಮಕ ಹೇಳಿಕೆ - ಶರಣ್ ಪಂಪ್ ವೆಲ್ ಹಾಗೂ ದಿನೇಶ್ ಮೆಂಡನ್ ಗೆ ಜಾಮೀನು.!?
ಉಡುಪಿ ಶೌಚಾಯದಲ್ಲಿ ಶೂಟಿಂಗ್ ವಿವಾದ
ಪ್ರಚೋದನಾತ್ಮಕ ಹೇಳಿಕೆ - ಶರಣ್ ಪಂಪ್ ವೆಲ್ ಹಾಗೂ ದಿನೇಶ್ ಮೆಂಡನ್ ಗೆ ಜಾಮೀನು.!?

ಉಡುಪಿ: ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹಾಗೂ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ವಿರುದ್ಧ ದಾಖಲಾಗಿದ್ದ ಸುಮೋಟೋ ಪ್ರಕರಣಕ್ಕೆ ಜಾಮೀನು ಮಂಜೂರಾಗಿದೆ. 

ಉಡುಪಿ ವೀಡಿಯೋ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಎಂದು ಪರಿಷತ್ ಹಾಗೂ ಬಜರಂಗದಳ ನೇತೃತ್ವದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ಹಾಗೂ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಅವರು ಪ್ರಚೋದನಾತ್ಮಕ ಹೇಳಿಕೆ ನೀಡಿದ ಆರೋಪದಲ್ಲಿ ಉಡುಪಿ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಸೊಮೊಟೋ ಕೇಸ್ ದಾಖಲಾಗಿತ್ತು. 

ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದು ಪರಿಷದ್ ಬಜರಂಗದಳ ನಡೆಸಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಆರೋಪದಲ್ಲಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಮತ್ತು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮೇಲೆ ಪೊಲೀಸರು ದಾಖಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಉಡುಪಿ ನ್ಯಾಯಾಲಯದಿಂದ ಜಾಮೀನು ಮಂಜೂರು ಆಗಿದೆ. ಇಬ್ಬರು ಮುಖಂಡರ ಪರವಾಗಿ ಖ್ಯಾತ ನ್ಯಾಯವಾದಿ ಮಟ್ಟಾರ್ ರತ್ನಾಕರ್ ಹೆಗ್ಡೆ ವಾದಿಸಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!