ಬಂಟ್ವಾಳ: ಯುವಕನ ಮೇಲೆ ಅಪರಿಚಿತರಿಂದ ಹಲ್ಲೆ - ದೂರು ದಾಖಲು
ಬಂಟ್ವಾಳ: ಯುವಕನ ಮೇಲೆ ಅಪರಿಚಿತರಿಂದ ಹಲ್ಲೆ - ದೂರು ದಾಖಲು

ಬಂಟ್ವಾಳ: ಅಪರಿಚಿತ ವ್ಯಕ್ತಿಗಳು ನನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.   

ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರ ಸಮೀಪದ ಮೈಂದಾಳ ನಿವಾಸಿ ನಿಸಾರ್ ಎಂಬವರ ಮೇಲೆ ಅಪರಿಚಿತ ವ್ಯಕ್ತಿಗಳು ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ. 

ಸೆ. 9 ರಂದು ರಾತ್ರಿ ಸುಮಾರು 9.45 ಗಂಟೆ ಸುಮಾರಿಗೆ ಅಜ್ಜಿಮನೆಯಿಂದ ನಿಸಾರ್ ಅವರು ರಸ್ತೆ ಬದಿ ನಡೆದುಕೊಂಡು ಬರುತ್ತಿದ್ದ ವೇಳೆ ಮೈಂದಾಳ ಸೇತುವೆ ಬಳಿ ಗುರಿಮಜಲು ಎಂಬಲ್ಲಿಗೆ ತಲುಪಿದಾಗ ಅಟೋ ರಿಕ್ಷಾದ ಬಳಿ ನಿಂತಿದ್ದ 5 ಜನರ ಪೈಕಿ ಇಬ್ಬರು ವ್ಯಕ್ತಿಗಳು ನಿಸಾರ್ ಅವರನ್ನು ಅಡ್ಡ ಗಟ್ಟಿ ಕೈ ಯಿಂದ ಹಲ್ಲೆ ನಡೆಸಿದ್ದಾರೆ. 

ಅದೇ ಸಂದರ್ಭದಲ್ಲಿ ರಿಕ್ಷಾದ ಬಳಿ ತಲವಾರು ಹಿಡಿದುಕೊಂಡು ನಿಂತಿದ್ದ ಮೂವರು ವ್ಯಕ್ತಿಗಳ ಪೈಕಿ ಓರ್ವ ನಿಸಾರ್ ಗೆ ದಾಳಿ ಮಾಡುವಂತೆ ಹೇಳುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸ್ಥಳದಿಂದ ನಿಸಾರ್ ಅವರು ತಪ್ಪಿಸಿ ಓಡಿ ಹೋಗಿದ್ದು ಬಳಿಕ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಈ ಬಗ್ಗೆ ಪೊಲೀಸರು ಅಲ್ಲಿನ ಸಿ.ಸಿ.ಕ್ಯಾಮರಾ ಪರಿಶೀಲನೆ ನಡೆಸುತ್ತಿದ್ದು, ಸತ್ಯಾಸತ್ಯತೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಲಾಗಿದೆ.

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!