ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ - ತಾಲೂಕು ವೈದ್ಯಾಧಿಕಾರಿಗೆ ಹಿಗ್ಗಾಮುಗ್ಗಾ ಥಳಿತ
ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ
ತಾಲೂಕು ವೈದ್ಯಾಧಿಕಾರಿಗೆ ಹಿಗ್ಗಾಮುಗ್ಗಾ ಥಳಿತ

ಡಿ ಗ್ರೂಪ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ತಾಲೂಕು ವೈದ್ಯಾಧಿಕಾರಿಗೆ ಮುಖ-ಮೂತಿ ನೋಡದೇ ಸಂಬಂಧಿಕರು, ಸ್ಥಳೀಯರು ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಎನ್.ಆರ್ ಪುರ ತಾಲೂಕಿನ ಬಾಳೆಹೊನ್ನೂರಿನ ಸರ್ಕಾರಿ ಅಸ್ಪತ್ರೆಯ ವಸತಿ ಗೃಹದಲ್ಲಿ ಈ ಘಟನೆ ನಡೆದಿದೆ.

ಎನ್.ಆರ್.ಪುರ ತಾಲೂಕು ಆಡಳಿತ ವೈದ್ಯಾಧಿಕಾರಿ ಟಿ.ಹೆಚ್.ಓ. ಡಾ. ಎಲ್ಡೋಸ್ ವಿರುದ್ಧ ಮಹಿಳಾ ಸಿಬ್ಬಂದಿಯ ಸಂಬಂಧಿಕರು ಆರೋಪ ಮಾಡಿದ್ದಾರೆ. ಸರ್ಕಾರಿ ಅಸ್ಪತ್ರೆಯ ವಸತಿ ಗೃಹದಲ್ಲಿ ಮಹಿಳೆಯನ್ನ ರೂಂನಲ್ಲಿ ಕೂಡಿ ಹಾಕಿಕೊಂಡು ಏನು ಮಾಡುತ್ತಿದ್ದೆ ಎಂದು ಪ್ರಶ್ನೆ ಮಾಡಿದ್ದಾರೆ. ಬಳಿಕ ವೈದ್ಯಾಧಿಕಾರಿಗೆ ಮುಖ-ಮೂತಿ ನೋಡದೇ ಮನಸೋ ಇಚ್ಛೆ ಸಂತ್ರಸ್ಥೆಯ ಸಂಬಂಧಿಕರು ಹಾಗೂ ಸ್ಥಳೀಯರು ಸೇರಿ ಥಳಿಸಿದ್ದಾರೆ.

ಈ ಹಿಂದೆಯೇ ನರ್ಸ್ ಒಬ್ಬರ ಕೆನ್ನೆಗೆ ಹೊಡೆದು ಇದೇ ವೈದ್ಯರು ಅಮಾನತ್ತಾಗಿದ್ದರು. ಇಷ್ಟೇ ಅಲ್ಲದೇ ಹಲವು ಬಾರಿ ಇವರ ವಿರುದ್ಧ ಆರೋಪಗಳು ಕೇಳಿ ಬಂದಿದ್ದವು. ಸದ್ಯ ಮಹಿಳೆಯ ಮೇಲೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧ ಪಟ್ಟಂತೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!