ಬಂಟ್ವಾಳ: ನೆರೆಮನೆಯ ಕಾಮುಕನಿಂದ ಹೀನ ಕೃತ್ಯ - ಕಿಟಕಿ ಮೂಲಕ ಕಿರುಕುಳಕ್ಕೆ ಯತ್ನ.!
ನಿದ್ರಿಸುತ್ತಿದ್ದ ಯುವತಿಗೆ ಕಿಟಕಿ ಮೂಲಕ ಲೈಂಗಿಕ ಕಿರುಕುಳ ನೀಡಲು ಯತ್ನ- ದೂರು ದಾಖಲು

ಬಂಟ್ವಾಳ: ಮನೆಯಲ್ಲಿ ಮಲಗಿರುವ ಯುವತಿಗೆ ಕೋಣೆಯ ಕಿಟಕಿ ತೆರೆದು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಘಟನೆ ಬಾಳ್ತಿಲ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಯುವತಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ಬಾಳ್ತಿಲ ಗ್ರಾಮದ ಕುದ್ರೆಬೆಟ್ಟು ಎಂಬಲ್ಲಿ ಈ ಘಟನೆ ಸೆ.20 ರಂದು ರಾತ್ರಿ 10 ಗಂಟೆಯ ಬಳಿಕ ನಡೆದಿದೆ ಎನ್ನಲಾಗಿದೆ.

First Information Reports (FIR): An explainer | NewsClick

ಆರೋಪಿ ಮನೆಯ ಕೋಣೆಯ ಕಿಟಕಿಯ ಪರದೆಯನ್ನು ಸರಿಸಿ ಬಳಿಕ ಕಿಟಕಿ ಮೂಲಕ ಯುವತಿಗೆ ಲೈಂಗಿಕ ಕಿರುಕುಳ ನೀಡುವ ಉದ್ದೇಶದಿಂದ ಇಣುಕಿ ನೋಡುತ್ತಿದ್ದ. ಈತ ಕಿಟಕಿಯ ಬಳಿ ನಿಂತು ಇಣುಕಿ ನೋಡುತ್ತಿದ್ದನ್ನು ಗಮನಿಸಿ ಯುವತಿ ಜೋರಾಗಿ ಕಿರುಚಿದಾಗ ಅಲ್ಲಿಂದ ಓಡಿ ಹೋಗಿದ್ದಾನೆ. ನೆರೆಮನೆಯ ಈತನ ಬಗ್ಗೆ ಪೋಲೀಸರಿಗೆ ದೂರು ನೀಡಿದ್ದಾರೆ. ‌‌

ದೂರುದಾರರ ತಂದೆ ನಿಧನ ಹೊಂದಿದ್ದು, ತಾಯಿ ಹಾಗೂ ಮೂವರು ಹೆಣ್ಣುಮಕ್ಕಳು ಮನೆಯಲ್ಲಿ ಇದ್ದಾರೆ. ಮನೆಯಲ್ಲಿ ಮಹಿಳೆಯರೇ ಇರುವ ಕಾರಣ ಈತ ರಾತ್ರಿ ವೇಳೆ ಲೈಂಗಿಕ ಕಿರುಕುಳ ನೀಡಲು ಬಂದಿದ್ದ ಎಂದು ಸ್ಥಳೀಯರು ಹೇಳಿದ್ದಾರೆ. ಈತನ ಬಂಧಿಸಿ ಸೂಕ್ತವಾದ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಪೋಲೀಸರಿಗೆ ಮನವಿ ಮಾಡಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!