ಮುಲ್ಕಿ: ಅಪರಿಚಿತ ಯುವಕನ ಶವ ಪತ್ತೆ.!
ಪಾವಂಜೆ ನದಿಯಲ್ಲಿ ಯುವಕನ ಶವ ಪತ್ತೆ

ಮುಲ್ಕಿ: ನದಿಯಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾದ ಘಟನೆ ಮುಲ್ಕಿ ಠಾಣಾ ವ್ಯಾಪ್ತಿಯ ಪಾವಂಜೆಯಲ್ಲಿ ನಡೆದಿದೆ.  

ಸುಮಾರು 19 ರಿಂದ 20 ವರ್ಷದ ಒಳಗಿನ ಪ್ರಾಯದ ಅಪರಿಚಿತ ಯುವಕನ ಶವವಾಗಿದ್ದು, ಮಂಗಳೂರು ಹೊರವಲಯದ ಮುಲ್ಕಿ ಠಾಣಾ ವ್ಯಾಪ್ತಿಯ ಪಾವಂಜೆ ಮಹಾಲಿಂಗೇಶ್ವರ ದೇವಸ್ಥಾನದ ನಂದಿನಿ ನದಿಯ ದಡದ ಪತ್ತೆಯಾಗಿದೆ.

ಹಳೆಯಂಗಡಿ ಪೂಜಾ ಫ್ರೆಂಡ್ಸ್ ನ ಸದಸ್ಯರು ಸ್ಥಳಕ್ಕೆ ಧಾವಿಸಿ ಶವವನ್ನು ಆಂಬುಲೆನ್ಸ್ ಮೂಲಕ ಮೂಲ್ಕಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ. ಕೆಲ ದಿನಗಳ ಹಿಂದೆ ಇದೇ ಪರಿಸರದ ಚೇಳಾಯರು ಅಣೆಕಟ್ಟಿನ ಬಳಿ ಯುವಕನೊಬ್ಬ ನಾಪತ್ತೆಯಾಗಿದ್ದು, ಈ ಶವ ಆತನದ್ದೇ ಇರಬೇಕು ಇರಬೇಕೆಂಬ ಶಂಕೆ ವ್ಯಕ್ತವಾಗಿದೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!