ಜವರಾಯನಾಗಿ ಬಂದ ಗೂಡ್ಸ್ ರೈಲು; ಮೂರು ಆನೆಗಳು ಮೃತ್ಯು
ಜವರಾಯನಾಗಿ ಬಂದ ಗೂಡ್ಸ್ ರೈಲು; ಮೂರು ಆನೆಗಳು ಮೃತ್ಯು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಕ್ಸಾ ಹುಲಿ ಸಂರಕ್ಷಿತ ಅರಣ್ಯದಲ್ಲಿ ಗೂಡ್ಸ್ ರೈಲು  ಡಿಕ್ಕಿ ಹೊಡೆದ ಪರಿಣಾಮ 3 ಆನೆಗಳು ಸಾವನ್ನಪ್ಪಿವೆ.

ರಾಜಭಟ್ಖಾವಾ ಮತ್ತು ಕಲ್ಚಿನಿ ರೈಲು ನಿಲ್ದಾಣಗಳ ನಡುವಿನ ಶಿಖಾರಿ ಗೇಟ್ ಬಳಿ ಬೆಳಗ್ಗೆ 7 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ. ಒಂದು ಮರಿ ಮತ್ತು ಎರಡು ವಯಸ್ಕ ಆನೆಗಳು ಗೂಡ್ಸ್‌ ರೈಲಿಗೆ ಡಿಕ್ಕಿ ಹೊಡೆದು ಸಾವನ್ನಪ್ಪಿವೆ. ಅಲಿಪುರ್ದೌರ್ ಜಿಲ್ಲೆಯ ಹುಲಿ ಸಂರಕ್ಷಿತ ಪ್ರದೇಶದ ಪಶ್ಚಿಮ ರಾಜಭಟ್ಖಾವಾ ಶ್ರೇಣಿಯಲ್ಲಿ ಸಂಭವಿಸಿದ ಈ ಘಟನೆಯು ಭಾರತದಲ್ಲಿ ರೈಲು ಡಿಕ್ಕಿಯಿಂದ ಆನೆಗಳು ಸಾವನ್ನಪ್ಪುವ ಅನೇಕ ಸಾಮಾನ್ಯ ಘಟನೆಗಳಲ್ಲಿ ಒಂದಾಗಿದೆ. 

ಈ ವರ್ಷದ ಆರಂಭದಲ್ಲಿ, ಪಶ್ಚಿಮ ಬಂಗಾಳದ ಅಲಿಪುರ್ದಾರ್ ಜಿಲ್ಲೆಯ ಚಪ್ರಮರಿ ಮೀಸಲು ಅರಣ್ಯದೊಳಗೆ ರೈಲು ಹಳಿ ದಾಟಲು ಪ್ರಯತ್ನಿಸುತ್ತಿದ್ದ ಗರ್ಭಿಣಿ ಆನೆ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಭಾರತದಲ್ಲಿ ಪ್ರತಿ ವರ್ಷ ಸರಾಸರಿ 20 ಆನೆಗಳು ರೈಲು ಡಿಕ್ಕಿಯಿಂದ ಸಾಯುತ್ತವೆ ಎಂದು ಸರ್ಕಾರದ ಅಂಕಿಅಂಶಗಳು ತೋರಿಸುತ್ತವೆ. ರೈಲು ಅಪಘಾತಗಳು ಪಶ್ಚಿಮ ಬಂಗಾಳದಲ್ಲಿ ಅಸ್ವಾಭಾವಿಕ ಆನೆಗಳ ಸಾವಿಗೆ ಒಂದು ಕಾರಣವಾಗಿದೆ ಮತ್ತು ಅದನ್ನು ತಡೆಯಲು ಸರ್ಕಾರವು ಕಠಿಣವಾಗಿ ಪ್ರಯತ್ನಿಸುತ್ತಿದೆ. 

 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!