ಕುಂದಾಪುರ; ಲಂಚ ಪಡೆಯುತ್ತಿದ್ದ ವೇಳೆ ಲೋಕಾ ಬಲೆಗೆ ಬಿದ್ದ ಅರಣ್ಯ ಇಲಾಖೆ ಸಿಬ್ಬಂದಿ
ಕುಂದಾಪುರ; ಲಂಚ ಪಡೆಯುತ್ತಿದ್ದ ವೇಳೆ ಲೋಕಾ ಬಲೆಗೆ ಬಿದ್ದ ಅರಣ್ಯ ಇಲಾಖೆ ಸಿಬ್ಬಂದಿ

ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಗುಮಾಸ್ತರೊಬ್ಬರು ಲಂಚಕ್ಕೆ ಬೇಡಿಕೆ ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಲೋಕಾಯುಕ್ತರು ನ.29 ಬುಧವಾರ ಸಂಜೆ ದಾಳಿ ನಡೆಸಿದ್ದಾರೆ.

ಕುಂದಾಪುರ ಉಪವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಗುಮಾಸ್ತರಾಗಿದ್ದ ಬಿ ಮಂಜುನಾಥ ಪೂಜಾರಿ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಹಲವು ದಿನಗಳ ಹಿಂದೆ ಆಲೂರಿನಿಂದ ಮಲಬಾರ್ ಕಬ್ಬಿಣದ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಈಚರ್ ಲಾರಿಯನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡಿದ್ದರು. ವಶಪಡಿಸಿಕೊಂಡ ವಾಹನವನ್ನು ಬಿಡಿಸಲು ಮಂಜುನಾಥ ಪೂಜಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. 

407 (ಈಚರ್ ಲಾರಿ) ವಾಹನ ಅರಣ್ಯ ಇಲಾಖೆಯಿಂದ ಮುಟ್ಟುಗೋಲಾಗಿದ್ದು ಅದನ್ನು ಬಿಡಿಸುವ ಸಂಬಂಧ ಕಡತವನ್ನು ಸಂಬಂಧಪಟ್ಟ ಅಧಿಕಾರಿಗೆ ಕಳುಹಿಸಲು ಮಂಜುನಾಥ ಪೂಜಾರಿ 20 ಸಾವಿರ ಲಂಚದ ಬೇಡಿಕೆಯಿಟ್ಟಿದ್ದರು.

ಇನ್ನು ಲಾರಿಗೆ ಸಂಬಂಧಿಸಿದವರು ಲೋಕಾಯುಕ್ತರಿಗೆ ವಿಷಯ ತಿಳಿಸಿದ್ದು, ಬುಧವಾರ ಸಂಜೆ ಲಂಚ ವಿನಿಮಯದ ವೇಳೆ ಡಿಸಿಎಫ್ ಕಚೇರಿ ಮೇಲೆ ದಾಳಿ ನಡೆದಿದೆ. ಉಡುಪಿ ಲೋಕಾಯುಕ್ತ ಇನ್ಸ್ ಪೆಕ್ಟರ್ ರಫೀಕ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಸದ್ಯ ತನಿಖೆ ನಡೆಯುತ್ತಿದೆ.

ನಗದು ಸಹಿತ ಆರೋಪಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.ಲೋಕಾಯುಕ್ತ ಮಂಗಳೂರು ಎಸ್‌ಪಿ ಸೈಮನ್, ಡಿವೈಎಸ್‌ಪಿ ಪ್ರಕಾಶ್ ರವರ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಹಾಗೂ ರಫೀಕ್ ಮತ್ತು ಸಿಬ್ಬಂದಿಗಳಾದ ನಾಗೇಶ್ ಉಡುಪ, ನಾಗರಾಜ್, ರಾಘವೇಂದ್ರ, ರೋಹಿತ್, ಪ್ರಸನ್ನ ದೇವಾಡಿಗ, ಅಬ್ದುಲ್ ಜಲಾಲ್, ರವೀಂದ್ರ ಗಾಣಿಗ, ರಮೇಶ್, ಸೂರಜ್, ಸುಧೀರ್ ರವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!