ಠಾಣೆಯಲ್ಲಿ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡ್ತಿದ್ದಾಗ ಮಹಿಳೆಗೆ ಗುಂಡೇಟು – ಸ್ಥಿತಿ ಗಂಭೀರ
ಠಾಣೆಯಲ್ಲಿ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡ್ತಿದ್ದಾಗ ಮಹಿಳೆಗೆ ಗುಂಡೇಟು – ಸ್ಥಿತಿ ಗಂಭೀರ

ಪಾಸ್‌ಪೋರ್ಟ್ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬಳಿಗೆ ಗುಂಡು ತಗುಲಿದ ಘಟನೆ ನಡೆದಿದೆ. ಸಬ್ ಇನ್‌ಸ್ಪೆಕ್ಟರ್ ಸರ್ವೀಸ್ ರಿವಾಲ್ವಾರ್ ಅನ್ನು ಕ್ಲೀನ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿದೆ. ಈ ಘಟನೆ ಉತ್ತರ ಪ್ರದೇಶದ ಅಲಿಘರ್‌ನಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಇಶ್ರತ್ ಎಂದು ಗುರುತಿಸಲಾಗಿದೆ. ಆಕೆ ತನ್ನ ಮಗನೊಂದಿಗೆ ಠಾಣೆಗೆ ಬಂದಿದ್ದರು. ಸ್ವಲ್ಪ ಸಮಯದ ನಂತರ ಬಂದ ಪೊಲೀಸ್ ಅಧಿಕಾರಿ ಎಸ್‌ಐ ಮನೋಜ್ ಶರ್ಮಾ ಅವರಿಗೆ ಪಿಸ್ತೂಲ್ ನೀಡಿದ್ದಾರೆ. ಈ ವೇಳೆ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದಿದೆ. ಇದರಿಂದ ಮಹಿಳೆ ತಲೆಗೆ ಗಂಭೀರ ಗಾಯವಾಗಿದ್ದು, ಆಕೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. 

ಗಾಯಗೊಂಡ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡು ಮಹಿಳೆಯ ತಲೆಯ ಹಿಂಭಾಗಕ್ಕೆ ತಗುಲಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಸ್‌ಐ ಅನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದ್ದು, ಆತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಘಟನೆ ಬಳಿಕ ಆತ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಬಲೆ ಬೀಸಲಾಗಿದೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!