ಲಂಚ ಪಡೆದ ಕೋಟ ಠಾಣೆ ಉಪನಿರೀಕ್ಷಕ ಅಮಾನತು.!!
ಕಾಲೇಜಿನ ಆಡಳಿತ ಮಂಡಳಿ ಗಲಾಟೆ, ಲಂಚ ಪ್ರಕರಣಕ್ಕೆ ಕೋಟ ಠಾಣೆ ಉಪನಿರೀಕ್ಷಕ ಅಮಾನತು:ಎಸ್ಪಿ

ಕೋಟ ಠಾಣೆ ಉಪನಿರೀಕ್ಷಕ, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿ0ಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ  ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕುಮಾರ್ ತಿಳಿಸಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿಯೊ0ದರ ಗಲಾಟೆಗೆ ಸಂಬ0ಧಿಸಿದ0ತೆ ದೂರುದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು. ಈ ಕುರಿತು ತನಿಖೆ ನಡೆಸಿ ಉಪನಿರೀಕ್ಷಕ ಶಂಭುಲಿ0ಗಯ್ಯ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಎಸ್.ಪಿ ಡಾ.ಅರುಣ್ ಕುಮಾರ್ ತಿಳಿಸಿದ್ದಾರೆ.

ಅಚ್ಲಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಅಧ್ಯಕ್ಷತೆ ವಿಚಾರಕ್ಕೆ ಮಂಡಳಿಯೊಳಗೆ ಗಲಾಟೆಗೆ ಸಂಬ0ಧಿಸಿದ0ತೆ ಮಧು ಭಾಸ್ಕರ್ ಹಾಗೂ ಮಹಿಮಾ ಮಧು ಭಾಸ್ಕರ್ ಎಂಬವರು ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕರ್ ವಿರುದ್ಧ ದೂರು ದಾಖಲಿಸಲು ಹಾಗೂ ಮಹಿಮಾ ವಿರುದ್ಧದ ದೂರಿಗೆ ಬಿ.ರಿಪೋರ್ಟ್ ನೀಡುವುದಾಗಿ ಆಗ ಠಾಣಾಧಿಕಾರಿಯಾಗಿದ್ದ ಶಂಭುಲಿ0ಗಯ್ಯ ಲಂಚ ಪಡೆದಿದ್ದರು. ಅದರಲ್ಲೂ ಹತ್ತಿರದ ಸಂಬ0ಧಿಯೋರ್ವರ ಖಾತೆಗೆ ಸ್ವಲ್ಪ ಮೊತ್ತದ ಹಣ ವರ್ಗಾಯಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ದಾಖಲೆಗಳನ್ನು ನೀಡಲು ಸಿದ್ಧವಿದ್ದು ಠಾಣಾಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸಬೇಕು ಎಂದು ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಮುಖ ಎನ್ನಲಾದ ದಿನೇಶ್ ಗಾಣಿಗ  ವೀಡಿಯೋ ಮೂಲಕ ಎಸ್.ಪಿ. ಅವರನ್ನು ವಿನಂತಿಸಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿತ್ತು. ಸದ್ಯ ಆರೋಪಿತರಾದ ಶಂಭುಲಿ0ಗಯ್ಯ ಅವರನ್ನು ಅಮಾನತುಗೊಳಿಸಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!