ಬೆಳ್ತಂಗಡಿ: ಕರಿಮಣಿ ಸರ ಕಳ್ಳತನ - ತಮಿಳುನಾಡು ಮೂಲದ ಕಳ್ಳಿಯರ ಬಂಧನ
ಬೆಳ್ತಂಗಡಿ: ಕರಿಮಣಿ ಸರ ಕಳ್ಳತನ - ತಮಿಳುನಾಡು ಮೂಲದ ಕಳ್ಳಿಯರ ಬಂಧನ

ಬೆಳ್ತಂಗಡಿ: ಸರಕಾರಿ ಬಸ್‌ ಹತ್ತುವ ವೇಳೆ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ತಿರುಪುರ್‌ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಬಂಧಿತ ಆರೋಪಿಗಳು.

ಡಿ. 12ರಂದು ಸರಕಾರಿ ಉದ್ಯೋಗಿ ವಾರಿಜಾ ಅವರು ಧರಿಸಿದ್ದ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರವು ಸರಕಾರಿ ಬಸ್‌ ಹತ್ತುವ ವೇಳೆ ಕಳ್ಳತನವಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.

ವಾರಿಜಾ ಅವರ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಇದೀಗ ಬೆಳ್ತಂಗಡಿ ಉಪ ನಿರೀಕ್ಷಕ ಚಂದ್ರಶೇಖರ್‌ ಮತ್ತು ಅವರ್ ತಂಡ ಖಚಿತ ಮಾಹಿತಿ ಮೇರೆಗೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರನ್ನು ಡಿ. 20ರಂದು ಧರ್ಮಸ್ಥಳ ಕೆಎಸ್ ಆರ್ ಟಿಸಿ ಬಸ್‌ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿದ ಕರಿಮಣಿ ಸರವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿಗಳಿಬ್ಬರ ಮೇಲೆ ಈ ಹಿಂದೆ ಬೆಳ್ತಂಗಡಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿವೆ. ಇನ್ನು ಆರೋಪಿಗಳು ವಿಚಾರಣೆ ವೇಳೆ ಮೂಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಆರೋಪಿಗಳನ್ನು ಡಿ. 20 ನ್ಯಾಯಾಧೀಶರ ಬಳಿ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!