ಉಡುಪಿ: ಗನ್ ಮಿಸ್ ಫೈರ್ ಆಗಿ ವ್ಯಕ್ತಿಗೆ ತಗುಲಿದ ಗುಂಡು.!!
ಪ್ರಸಿದ್ಧ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರ್ ಆಗಿ ಓರ್ವನಿಗೆ ಗಾಯ

ಉಡುಪಿ: ಉಡುಪಿಯ ಪ್ರಸಿದ್ಧ ಬಟ್ಟೆ ಮಳಿಗೆಯಲ್ಲಿ ಫೈರಿಂಗ್ ಸಂಭವಿಸಿ ಓರ್ವನಿಗೆ ಗಾಯವಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. 

ಬನ್ನಂಜೆಯಲ್ಲಿರುವ ಜಯಲಕ್ಷ್ಮಿ ಬಟ್ಟೆ ಮಳಿಗೆಯಲ್ಲಿ ಈ ಘಟನೆ ಸಂಭವಿಸಿದೆ. ಮಳಿಗೆಯ ಒಳಗಿದ್ದ ಗನ್ ನ್ನು ಪರಿಶೀಲಿಸುವಾಗ ಮಿಸ್ ಫೈರ್ ಆಗಿ ಮಳಿಗೆ ಸಿಬ್ಬಂದಿಯೋರ್ವನಿಗೆ ಗುಂಡು ತಗುಲಿ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಳಿಗೆಯಲ್ಲಿ ಯಾರೋ ಬಿಟ್ಟು ಹೋಗಿದ್ದ ಗನ್ ಪತ್ತೆಯಾಗಿತ್ತು. ಅದನ್ನು ಎತ್ತಿಕೊಂಡ ಸಿಬ್ಬಂದಿ ಆಪರೇಟ್ ಮಾಡಿ ಪರೀಕ್ಷಿಸಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಇನ್ನೋರ್ವ ಸಿಬ್ಬಂದಿಗೆ ಗುಂಡು ತಗುಲಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ದೌಡಾಯಿಸಿದ್ದು, ಗನ್ ವಶಕ್ಕೆ ಪಡೆದುಕೊಂಡಿದ್ದಾರೆ. ಗನ್ ಯಾರದ್ದು.? ಮಳಿಗೆಯಲ್ಲಿ ತಂದಿಟ್ಟಿದ್ದು ಯಾರು ಅನ್ನೋದರ ಕುರಿತು ತನಿಖೆ ನಡೆಸುತ್ತಿದ್ದಾರೆ. .ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!