ಬಂಟ್ವಾಳ: ಮಾದಕ ವಸ್ತು ಸೇವಿಸಿ ಅಸಭ್ಯ ವರ್ತನೆ -  ಮೂವರ ಬಂಧನ.!
ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ
ನವಾಝ್, ಹಾರಿಸ್, ಜಸೀಂ ಅರೆಸ್ಟ್.!

ಬಂಟ್ವಾಳ : ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಮಾಡುತ್ತಿದ್ದ ಮೂವರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಮಂಗಳವಾರ ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

ಬಿ.ಸಿ.ರೋಡ್ ಸಮೀಪದ ಪರ್ಲಿಯಾ ನಿವಾಸಿ ನವಾಝ್, ನಂದರಬೆಟ್ಟು ನಿವಾಸಿ ಹಾರಿಸ್ ಯಾನೆ ಆಝಾದ್ ಮತ್ತು ಜಸೀಂ ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಬಿ.ಸಿ.ರೋಡ್ ನ ಬಸ್ತಿಪಡ್ಪು ಸಾರ್ವಜನಿಕ ಸ್ಥಳದಲ್ಲಿ ಅಸಭ್ಯ ವರ್ತನೆ ಮಾಡುತ್ತಿರುವುದನ್ನು ಗಮನಿಸಿದ ಬಂಟ್ವಾಳ ನಗರ ಠಾಣಾಧಿಕಾರಿ ರಾಮಕೃಷ್ಣ ಹಾಗೂ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಅವರನ್ನು ವಿಚಾರಣೆ ಮಾಡಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ವಸ್ತುಗಳನ್ನು ಸೇವನೆ ಮಾಡಿರುವುದು ಬೆಳಕಿಗೆ ಬಂದಿದೆ.

ಮೂವರು ಆರೋಪಿಗಳ ಮೇಲೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದಾರೆ. ಗಾಂಜಾ ಸಹಿತ ಇತರ ಮಾದಕ ದ್ರವ್ಯ ಸೇವನೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದ ದೂರಿನ ಮೇಲೆ ಪೊಲೀಸರು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯುತ್ತಿದ್ದು, ಕಳೆದ ಎರಡು ದಿನಗಳಲ್ಲಿ ಮಾದಕ ದ್ರವ್ಯ ಸೇವನೆ ವಿಚಾರದಲ್ಲಿ ಒಟ್ಟು ಆರು ಮಂದಿ ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!