ಕಡಬ: ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳ್ಳತನ
ಕಡಬ: ಲಕ್ಷಾಂತರ ರೂ. ಮೌಲ್ಯದ ನಗ, ನಗದು ಕಳ್ಳತನ

ಕಡಬ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ನಗ, ನಗದನ್ನು ದೋಚಿರುವ ಘಟನೆ ಕಡಬ ಠಾಣಾ ವ್ಯಾಪ್ತಿಯ ಆತೂರು ಕೊಯಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಆತೂರು ಕೊಯಿಲ ಸಮೀಪದ ಕಲಾಯಿ ನಿವಾಸಿ ಯಾಕುಬ್ ಎಂಬವರ ಮನೆಯಲ್ಲಿ ಕಳ್ಳತನವುಂಟಾಗಿದೆ.

ಮನೆ ಮಂದಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ವೇಳೆ ಘಟನೆ ನಡೆದಿದೆ. ಪಕ್ಕದ ಮನೆಯೊಂದರ ಬೀಗ‌ ಮುರಿಯುವ ವೇಳೆ ಆಟೋ ರಿಕ್ಷಾ ಆಗಮಿಸುವುದನ್ನು ನೋಡಿದ ಕಳ್ಳರು ಪರಾರಿಯಾಗಿರುವುದಾಗಿ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಕಡಬ ಠಾಣಾ ಪೊಲೀಸರು, ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!