ಉಡುಪಿ: ವೇಶ್ಯಾವಾಟಿಕೆ ದಂಧೆ - ಇಬ್ಬರ ಬಂಧನ
ಉಡುಪಿ: ವೇಶ್ಯಾವಾಟಿಕೆ ದಂಧೆ - ಇಬ್ಬರ ಬಂಧನ

ಉಡುಪಿ: ರೆಸಿಡೆನ್ಸಿ ಒಂದರಲ್ಲಿ ಮಹಿಳೆಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ತೊಡಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 

ಮೂಡನಿಡಂಬೂರು ಗ್ರಾಮದ ಮೀನು ಮಾರ್ಕೆಟ್ ಬಳಿ ಇರುವ ಕಾರ್ತಿಕ್ ಟವರ್‌ನಲ್ಲಿರುವ ಎಸ್.ಎಸ್ ರೆಸಿಡೆನ್ಸಿಯಲ್ಲಿ ಮಹಿಳೆಯರನ್ನು ಕರೆಸಿ ಅಕ್ರಮವಾಗಿ ಅನೈತಿಕ ವೇಶ್ಯಾವಾಟಿಕೆ  ನಡೆಸುತ್ತಿರುವುದಾಗಿ ದೊರೆತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ 

ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಮಧು ಹಾಗೂ ರೂಂ ಬಾಯ್ ಸುಕುಮಾರ್ ಎಂಬವರನ್ನು ವಶಕ್ಕೆ ಪಡೆದು, ಅವರ ವಶದಲ್ಲಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 03/2024 , ಕಲಂ: 370 ಐಪಿಸಿ & 3,4,5,6,7 ಐಟಿಪಿ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ. 


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!