ಸುರತ್ಕಲ್: ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ.!
ಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ನದಿ ಬಳಿ ಶವವಾಗಿ ಪತ್ತೆ

ಸುರತ್ಕಲ್ : SSLC ಪ್ರಿಪರೇಟರಿ ಪರೀಕ್ಷೆ ನಂತರ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿದ್ದಾರೆ. ಮುಲ್ಕಿ ಠಾಣಾ ವ್ಯಾಪ್ತಿಯ ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಪರೀಕ್ಷೆ ಬರೆದು ಈಜಲು ತೆರಳಿದ್ದ ನಾಲ್ವರು ನದಿಯಲ್ಲಿ ಮುಳುಗಿ ಮೃತಪಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಯಶ್ವಿತ್ ಚಂದ್ರಕಾಂತ್, ನಿರೂಪ್, ಅನ್ವಿತ್ ಹಾಗೂ ರಾಘವೇಂದ್ರ ಮೃತ ದುರ್ದೈವಿಗಳು. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ಸುರತ್ಕಲ್​‌ನ ಖಾಸಗಿ ಪ್ರೌಢಶಾಲೆಯಲ್ಲಿ SSLC ಓದುತ್ತಿದ್ದ ವಿದ್ಯಾರ್ಥಿಗಳು ನಿನ್ನೆ SSLC ಇಂಗ್ಲಿಷ್ ಪೂರ್ವಸಿದ್ಧತಾ ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆ ಬರೆದು ಶಾಲೆಯಿಂದ ಹೊರಬಂದ 4 ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಎಷ್ಟು ಸಮಯವಾದರೂ ಮಕ್ಕಳು ಮನೆಗೆ ಬರದ ಹಿನ್ನೆಲೆ ಪೋಷಕರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆದರೆ ಈಗ ಹಳೆಯಂಗಡಿ ಬಳಿಯ ನದಿಯಲ್ಲಿ ನಾಲ್ವರ ಶವ ಪತ್ತೆಯಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.


You may also like

Comments

https://newsdaksha.online/assets/images/user-avatar-s.jpg

0 comment

Write the first comment for this!